ಕರ್ನಾಟಕ

karnataka

ETV Bharat / state

ಶಿವಮೊಗ್ಗ; ಕುರಿ, ಮೇಕೆ ಸಾವಿನ ಪರಿಹಾರಧನ ಬಿಡುಗಡೆ ಮಾಡಲು ಆಗ್ರಹ - Nava Karnataka Vedike Forum

ಪಶುಪಾಲನೆಗೆ ಉತ್ತೇಜನ ನೀಡುವ ಉದ್ದೇಶದಿಂದ, ಪಶುಪಾಲಕರಿಗೆ ಆಗುವ ನಷ್ಟವನ್ನು ತಪ್ಪಿಸಲು ಸರ್ಕಾರದ ವತಿಯಿಂದ 5000 ರೂ.ಗಳ ಪರಿಹಾರ ಹಣವನ್ನು ನೀಡಲಾಗುತ್ತಿತ್ತು. ಆದರೆ 2019 ರಿಂದ ಈ ಹಣವನ್ನು ಬಿಡುಗಡೆ ಮಾಡಿಲ್ಲ. ಹಾಗಾಗಿ ಹಣ ಬಿಡುಗಡೆ ಮಾಡಲು ಒತ್ತಾಯಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ
ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

By

Published : Jul 13, 2020, 4:32 PM IST

Updated : Jul 13, 2020, 4:50 PM IST

ಶಿವಮೊಗ್ಗ: ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಕುರಿ-ಮೇಕೆಗಳು ಸಾವನ್ನಪ್ಪಿದಾಗ ನೀಡಲಾಗುವ ಪರಿಹಾರದ ಹಣ ಬಿಡುಗಡೆ ಮಾಡಲು ಒತ್ತಾಯಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕುರಿ, ಮೇಕೆ ಸಾವಿನ ಪರಿಹಾರಧನ ಬಿಡುಗಡೆ ಮಾಡಲು ಆಗ್ರಹ

ಈ ಹಿಂದಿನ ಸರ್ಕಾರ ಪಶುಪಾಲನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಹಾಗೂ ರೈತರು ಕೃಷಿ ಜೊತೆಗೆ ಪಶುಪಾಲನೆಯನ್ನು ಕೈಗೊಂಡು ಆರ್ಥಿಕವಾಗಿ ಸದೃಡವಾಗಬೇಕೆಂದು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವನ್ನು ಆರಂಭಿಸಿತ್ತು.

ಈ ನಿಗಮದಡಿಯಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಹಕಾರ ಸಂಘಗಳನ್ನು ಸ್ಥಾಪಿಸುವುದು ಹಾಗೂ ಆಕಸ್ಮಿಕವಾಗಿ ಕುರಿ ಮತ್ತು ಮೇಕೆಗಳು ಸಾವನ್ನಪ್ಪಿದಾಗ ಪಶುಪಾಲಕರಿಗೆ ಆಗುವ ನಷ್ಟವನ್ನು ತಪ್ಪಿಸಲು ಸರ್ಕಾರದ ವತಿಯಿಂದ 5000 ರೂ.ಗಳ ಪರಿಹಾರ ಹಣವನ್ನು ನೀಡಲಾಗುತ್ತಿತ್ತು. ಆದರೆ 2019 ರಿಂದ ಈ ಹಣವನ್ನು ಬಿಡುಗಡೆ ಮಾಡಿಲ್ಲ. ಹಾಗಾಗಿ ಪರಿಹಾರ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Last Updated : Jul 13, 2020, 4:50 PM IST

ABOUT THE AUTHOR

...view details