ಶಿವಮೊಗ್ಗ: ನಗರದ ಹೊನ್ನಾಳಿ ರಸ್ತೆಯಲ್ಲಿರುವ ಮೇಲ್ಸೇತುವೆಯ ದುರಸ್ತಿ ಕಾಮಗಾರಿ ಅವಧಿಗಿಂತ ಮೊದಲೇ ಪೂರ್ಣಗೊಂಡು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ.
ಶಿವಮೊಗ್ಗದಲ್ಲಿ ರೈಲ್ವೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ - ಶಿವಮೊಗ್ಗದ ಹೊನ್ನಾಳಿ ರಸ್ತೆ
ಶಿವಮೊಗ್ಗದ ಹೊನ್ನಾಳಿ ರಸ್ತೆಯಲ್ಲಿರುವ ರೈಲ್ವೆ ಮೇಲ್ಸೇತುವೆಯ ದುರಸ್ತಿ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ಮುಕ್ತವಾಗಿದೆ.
ಶಿವಮೊಗ್ಗದಲ್ಲಿ ರೈಲ್ವೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ
ಹೊಸಪೇಟೆ- ಶಿವಮೊಗ್ಗ ರಾಜ್ಯ ಹೆದ್ದಾರಿಯ ರೈಲ್ವೆ ಮೇಲ್ಸೇತುವೆಯ ಸ್ಟ್ರಿಪ್ ಸೀಲ್ ಅಳವಡಿಕೆಗಾಗಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಏಕಮುಖ ಸಂಚಾರ ಆದೇಶಿಸಿ ಒಂದು ತಿಂಗಳ ಒಳಗಾಗಿ ದುರಸ್ತಿ ಕಾರ್ಯ ಪೂರ್ಣಗೊಳಿಸಲು ಸೂಚಿಸಿದ್ದರು.
ಲೋಕೋಪಯೋಗಿ ಇಲಾಖೆಯಿಂದ ದುರಸ್ತಿ ಕಾಮಗಾರಿ 21 ದಿನಗಳಲ್ಲಿ ಪೂರ್ಣಗೊಳಿಸಲಾಗಿದ್ದು, ಇದೀಗ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಹೊಸದಾಗಿ 8 ಮೀಟರ್ ಉದ್ದದ 21 ಸ್ಟ್ರಿಪ್ ಸೀಲ್ ಜಾಯಿಂಟ್ಗಳನ್ನು ಅಳವಡಿಸಿ ಡಾಂಬರೀಕರಣ ಹಾಗೂ ಪ್ಯಾರಾಪಿಟ್ ವಾಲ್ಗಳಿಗೆ ಬಣ್ಣ ಬಳಿಯಲಾಗಿದೆ.