ಶಿವಮೊಗ್ಗ: ಊಟದಲ್ಲಿ ವ್ಯತ್ಯಾಸವಾಗಿ ವಿದ್ಯಾನಗರದಲ್ಲಿರುವ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಮಹಿಳಾ ವಸತಿನಿಲಯದ 20ಕ್ಕೂ ಅಧಿಕ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಹ್ಯಾದ್ರಿ ಕಾಲೇಜಿನ ಮಹಿಳಾ ಹಾಸ್ಟೆಲ್ನಲ್ಲಿ ಫುಡ್ ಪಾಯ್ಸನ್.. ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು.. ನಿನ್ನೆ ರಾತ್ರಿ ಹಾಸ್ಟೆಲ್ನಲ್ಲಿ ಊಟ ಮಾಡಿದ ಬಳಿಕ ಕೆಲವು ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ವಾಂತಿ ಕಾಣಿಸಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಇದರಲ್ಲಿ ಐವರು ವಿದ್ಯಾರ್ಥಿಗಳು ಗುಣಮುಖವಾಗಿ ವಿದ್ಯಾರ್ಥಿನಿಯಲಕ್ಕೆ ತೆರಳಿದ್ದರು.
ಉಳಿದ 12 ವಿದ್ಯಾರ್ಥಿನಿಯರು ಅಶೋಕ ಸಂಜೀವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಬಾಲಕಿಯರ ಆರೋಗ್ಯ ಚೇತರಿಕೆ ಕಂಡಿದ್ದು, ಸಂಜೆ ವೇಳೆಗೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಘಟನೆ ಸಂಬಂಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಸಚಿವ ಈಶ್ವರಪ್ಪನವರ ಪುತ್ರ ಕೆ ಈ ಕಾಂತೇಶ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.