ಶಿವಮೊಗ್ಗ: ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಲಾಕ್ ಡೌನ್ ನಿಯಮವನ್ನು ಉಲ್ಲಂಘನೆ ಮಾಡಿದ ಅಂಗಡಿಯ ಮಾಲೀಕರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ-2020ರ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.
ವಿನೋಬನಗರ ಪೊಲೀಸ್ ಠಾಣೆಯಲ್ಲಿ 03, ಶಿವಮೊಗ್ಗ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ 02, ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ 01 ಪ್ರಕರಣ ಸೇರಿ ಒಟ್ಟು 6 ಪ್ರಕರಣಗಳನ್ನು ದಾಖಲಿಸಲಾಗಿದೆ.