ಶಿವಮೊಗ್ಗ:ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಬೇಕೆಂಬ ನಿಟ್ಟಿನಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಅವುಗಳನ್ನು ಜನಸಾಮಾನ್ಯರ ಅನುಕೂಲಕ್ಕೆ ಒದಗಿಸಿಕೊಡಬೇಕೆಂದು ಮಹಾನಗರ ಪಾಲಿಕೆ ಮೇಯರ್ ಸುವರ್ಣಾಶಂಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸ್ಮಾರ್ಟ್‌ಸಿಟಿ ಯೋಜನೆ ಕಾಮಗಾರಿ ವೀಕ್ಷಿಸಿದ ಮೇಯರ್ ಸುವರ್ಣಾಶಂಕರ್ - shimogha mayor visits to constructions place
ಶಿವಮೊಗ್ಗದ ನಗರದ ಹಳೇ ಜೈಲು ಆವರಣದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಮಹಾನಗರ ಪಾಲಿಕೆ ಮೇಯರ್ ಸುವರ್ಣಾಶಂಕರ್ ವೀಕ್ಷಿಸಿದರು. ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಹಳೇ ಜೈಲು ಆವರಣದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ವಿಜಯದಶಮಿ ಕಾರ್ಯಕ್ರಮ ನಡೆಯುವಂತಹ ಹಳೇ ಜೈಲು ಆವರಣದ ಒಂದು ಭಾಗದಲ್ಲಿ ಸ್ಟೇಜ್ ಹಾಗೂ ಇನ್ನಿತರ ಕಾಮಗಾರಿಗಳು ನಡೆಯುತ್ತಿದ್ದು, ಇವುಗಳನ್ನು ತ್ವರಿತಗತಿಯಲ್ಲಿ ನಡೆಸಬೇಕು. ಆ ಮೂಲಕ ಯಾವ ಉದ್ದೇಶಕ್ಕೆ ಈ ಕಾಮಗಾರಿ ನಡೆಯುತ್ತಿದೆಯೋ ಅದು ಸದ್ಬಳಕೆ ಯಾಗುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಮೈದಾನದಲ್ಲಿ 2 ಸ್ಟೇಜ್ ಕಾಮಗಾರಿ ಈಗಾಗಲೇ ಆರಂಭಗೊಂಡಿವೆ. 3ನೇ ಸ್ಟೇಜ್‌ಗೆ ಸಂಬಂಧಿಸಿದಂತೆ ಸ್ಥಳ ನಿಗದಿಗೊಳಿಸಿ ಗುರುತು ಹಾಕಲಾಗಿದೆ. 2 ಸ್ಟೇಜ್‌ಗಳ ಕಾಮಗಾರಿ ಶೀಘ್ರಗತಿಯಲ್ಲಿ ನಡೆಯಬೇಕು. ಒಟ್ಟಾರೆ ಕಾಮಗಾರಿ ತ್ವರಿತಗತಿಯಲ್ಲಿ ನಡೆಯಬೇಕು ಮತ್ತು ಗುಣಮಟ್ಟದಿಂದ ಕೂಡಿರಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಸುನೀತಾ ಅಣ್ಣಪ್ಪ, ಕೆ.ಜಿ. ಕುಮಾರಸ್ವಾಮಿ ಸೇರಿದಂತೆ ಮೊದಲಾದವರಿದ್ದರು.