ಶಿವಮೊಗ್ಗ:ಪ್ರಬಲವಾದ ಕಾನೂನು ರೂಪಿಸಿ ಡ್ರಗ್ಸ್ ಮಾಫಿಯಾದಲ್ಲಿ ತೊಡಗಿದವರನ್ನು ಮಟ್ಟಹಾಕಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿ ಪ್ರತಿಭಟನೆ - ಎಬಿವಿಪಿ ಪ್ರತಿಭಟನೆ ಸುದ್ದಿ
ಡ್ರಗ್ಸ್ ಮಾಫಿಯಾದಲ್ಲಿ ತೊಡಗಿದವರಿಗೆ ಶಿಕ್ಷೆಯಾಗಬೇಕು ಜೊತೆಗೆ ಈ ಸಂಬಂಧ ಪ್ರಬಲವಾದ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿ ಪ್ರತಿಭಟನೆ
ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿ ಪ್ರತಿಭಟನೆ
ಕೆಲ ದಿನಗಳಿಂದ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಸಂಬಂಧ ನಟ, ನಟಿಯರನ್ನು ತನಿಖೆ ನಡೆಸಲಾಗುತ್ತಿದೆ. ಹಾಗಾಗಿ ಡ್ರಗ್ಸ್ ಮಾಫಿಯಾ ಎನ್ನುವುದು ಯುವ ಸಮೂಹವನ್ನು ದಾರಿ ತಪ್ಪಿಸುತ್ತಿದೆ. ಯುವಕ, ಯುವತಿಯರು ಮಾದಕ ವ್ಯಸನಿಗಳಾಗುತ್ತಿದ್ದಾರೆ.
ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳ ಮುಖ್ಯಸ್ಥರಿಗೆ ತಮ್ಮ ಕಾಲೇಜು ಕ್ಯಾಂಪಸ್ಗಳನ್ನು ಮಾದಕ ವಸ್ತುಗಳ ಮುಕ್ತ ಕ್ಯಾಂಪಸ್ ಎಂದು ಘೋಷಿಸಿಕೊಳ್ಳಬೇಕು. ಶಿಕ್ಷಣ ಕ್ಷೇತ್ರವನ್ನು ಮಾದಕ ವಸ್ತುಗಳಿಂದ ರಕ್ಷಿಸಲು ಮಾದಕ ವಸ್ತು ನಿಗ್ರಹದಳವನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿ, ಪ್ರತಿಭಟನೆ ನಡೆಸಿದರು.
Last Updated : Sep 21, 2020, 7:26 PM IST