ಶಿವಮೊಗ್ಗ: 2023ರ ವಿಧಾನಸಭಾ ಚುನಾವಣೆಯ ಅಂತಿಮ ಕಣದಲ್ಲಿ ಜಿಲ್ಲೆಯಲ್ಲಿ 74 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ನಿನ್ನೆ(ಏ.24) ಅಂತಿಮ ದಿನವಾಗಿತ್ತು. ಸುಮಾರು 10 ಜನ ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ. ಇದರಿಂದ 74 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಕ್ಷೇತ್ರವಾರು ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ ಹೀಗಿದೆ..
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ:ಒಟ್ಟು 11 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕೆ.ಬಿ ವಿಜಯ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‍ನ ಶ್ರೀನಿವಾಸ್ ಎಸ್. ಕೆ, ಆಮ್ ಆದ್ಮಿ ಪಾರ್ಟಿಯ ಮಂಜುನಾಥ ಎಸ್.ಎಸ್, ಭಾರತೀಯ ಜನತಾ ಪಾರ್ಟಿಯ ಕೆ.ಬಿ ಅಶೋಕ ನಾಯ್ಕ, ಬಹುಜನ ಸಮಾಜ ಪಾರ್ಟಿಯ ಎ.ಡಿ ಶಿವಪ್ಪ, ಕರ್ನಾಟಕ ರಾಷ್ಟ್ರ ಸಮಿತಿಯ ನಿರಂಜನ ಇ, ಜನತಾ ದಳ(ಎಸ್) ಶಾರದಾ ಪೂರ್ಯಾನಾಯ್ಕ, ಪಕ್ಷೇತರ ರಂಗಸ್ವಾಮಿ ಎಲ್, ಭೀಮಪ್ಪ ಬಿ.ಹೆಚ್, ತಿಪ್ಪೇರುದ್ರಸ್ವಾಮಿ.ಟಿ, ಪ್ರವೀಣ್ ನಾಯ್ಕ್ ನಡುವೆ ಪೈಪೋಟಿ ನಡೆಯಲಿದೆ.
ಸೊರಬ ಕ್ಷೇತ್ರ:ಒಟ್ಟು 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜೆಡಿಎಸ್ನಿಂದ ಬಿ.ಚಂದ್ರಪ್ಪಗೌಡ, ಸಮಾಜವಾದಿ ಪಾರ್ಟಿ ಪರಶುರಾಮ ವಿ.ಜಿ, ಎಎಪಿ ಚಂದ್ರಶೇಖರ ಕೆ.ವೈ, ಉತ್ತಮ ಪ್ರಜಾಕೀಯ ಪಾರ್ಟಿ ಲಕ್ಷ್ಮೀಕಾಂತ ಸಿ.ಎಸ್, ಐಎನ್‍ಸಿ ಮಧು ಬಂಗಾರಪ್ಪ, ಬಿಜೆಪಿ ಎಸ್.ಕುಮಾರ್ ಬಂಗಾರಪ್ಪ, ಕೆಆರ್ಎಸ್ ಟಿ.ಮಂಜುನಾಥ, ಪಕ್ಷೇತರ ಶಿವಯೋಗಿ ಎಸ್.ಎಸ್, ಗುಡ್ಡಪ್ಪ, ಜೆ.ಎಸ್.ಚಿದಾನಂದ ಗೌಡ ಕಣದಲ್ಲಿದ್ದಾರೆ.
ಸಾಗರ ಕ್ಷೇತ್ರ:ಒಟ್ಟು 09 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜೆಡಿಎಸ್ ಸೈಯದ್ ಜಾಕಿರ್, ಕೆಆರ್ಎಸ್ ಕಿರಣ್.ಬಿ.ಇ, ಬಿಜೆಪಿ ಹೆಚ್.ಹಾಲಪ್ಪ, ಉತ್ತಮ ಪ್ರಜಾಕೀಯ ಪಾರ್ಟಿ ಸೋಮರಾಜ ಎನ್, ಐಎನ್‍ಸಿ ಗೋಪಾಲಕೃಷ್ಣ ಬೇಳೂರು, ಎಎಪಿ ಕೆ.ದಿವಾಕರ, ಪಕ್ಷೇತರ ಶಿವಕುಮಾರ ಕೆ.ವಿ, ಹರಟೆ ಗಾಮಪ್ಪ, ಟಿ.ಎನ್ ಶ್ರೀನಿವಾಸ ಕಣದಲ್ಲಿದ್ದಾರೆ.