ಶಿವಮೊಗ್ಗ:ರಾಜ್ಯದಲ್ಲಿ ಡ್ರಗ್ಸ್ ದಂಧೆ ನಡೆಸುತ್ತಿರುವ ದಂಧೆಕೋರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಯುವಮೋರ್ಚಾದ ಕಾರ್ಯಕರ್ತರು ನಗರದ ತುಂಗಾ ನಗರ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದರು.
ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಂತೆ ಶಿವಮೊಗ್ಗ ಬಿಜೆಪಿ ಯುವಮೋರ್ಚಾ ಆಗ್ರಹ - ಶಿವಮೊಗ್ಗ ಸುದ್ದಿ
ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಯುವಮೋರ್ಚಾದ ಕಾರ್ಯಕರ್ತರು ತುಂಗಾ ನಗರ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದರು.
ಶಿವಮೊಗ್ಗ ಬಿಜೆಪಿ ಯುವಮೋರ್ಚಾ
ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ದಂಧೆ ವ್ಯಾಪಕವಾಗಿ ರಾಜ್ಯದಲ್ಲಿ ಹರಡುತ್ತಿದೆ. ಡ್ರಗ್ಸ್ ಪ್ರಕರಣದಲ್ಲಿ ಕೆಲ ನಟ-ನಟಿಯರ ಹಾಗೂ ಪ್ರಭಾವಿಗಳ ಹೆಸರು ಕೇಳಿ ಬಂದಿದೆ. ಹಾಗಾಗಿ ಡ್ರಗ್ಸ್ ದಂಧೆಕೋರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಭಾವಿಗಳ ಒತ್ತಡಕ್ಕೆ ಮಣಿಯದೇ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಈ ಮೂಲಕ ಡ್ರಗ್ಸ್ ಮುಕ್ತ ಕರ್ನಾಟಕವನ್ನಾಗಿ ಮಾಡಬೇಕು ಎಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ ಹಾಗೂ ಮುಖಂಡರಾದ ದಿನೇಶ್, ಪ್ರೀತಮ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Last Updated : Sep 30, 2020, 2:47 PM IST