ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 142 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 17,243 ಕ್ಕೆ ಏರಿಕೆಯಾಗಿದೆ. ಇಂದು 282 ಜನ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 15,224 ಜನ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಇಂದು ಕೊರೊನಾದಿಂದ 2 ಸಾವು ಸಂಭವಿಸಿದೆ. ಈ ಮೂಲಕ ಇದುವರೆಗೂ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 317ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,717 ಜನ ಚಿಕಿತ್ಸೆಯಲ್ಲಿದ್ದಾರೆ. ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 109 ಜನ, ಕೋವಿಡ್ ಕೇರ್ ಸೆಂಟರ್ನಲ್ಲಿ 76 ಜನ, ಖಾಸಗಿ ಆಸ್ಪತ್ರೆಯಲ್ಲಿ 204 ಜನ, ಮನೆಯಲ್ಲಿ 1,292 ಜನ ಐಸೋಲೇಷನ್ನಲ್ಲಿದ್ದಾರೆ. ಆರ್ಯುವೇದ ಕಾಲೇಜಿನಲ್ಲಿ 36 ಸೋಂಕಿತರಿದ್ದಾರೆ. ಜಿಲ್ಲೆಯಲ್ಲಿ ಕಂಟೇನ್ಮೆಂಟ್ ಝೋನ್ ಸಂಖ್ಯೆ 6,828 ಏರಿಕೆ ಆಗಿದೆ. ಇದರಲ್ಲಿ 4,127 ಝೋನ್ ವಿಸ್ತರಣೆಯಾಗಿದೆ.