ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 30 ಜನರಲ್ಲಿ ಕೊರೊನಾ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ18,922ಕ್ಕೆ ಏರಿಕೆಯಾಗಿದೆ. ಇಂದು 101 ಜನ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 18,034 ಜನ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಇಂದು ಕೊರೊನಾಗೆ ಓರ್ವ ಬಲಿಯಾಗಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 341ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 562 ಜನ ಚಿಕಿತ್ಸೆಯಲ್ಲಿದ್ದಾರೆ.
ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 97 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್ನಲ್ಲಿ ಯಾರೂ ಚಿಕಿತ್ಸೆ ಪಡೆಯುತ್ತಿಲ್ಲ. ಖಾಸಗಿ ಆಸ್ಪತ್ರೆಯಲ್ಲಿ 76 ಜನ ಇದ್ದಾರೆ. ಮನೆಯಲ್ಲಿ 382 ಜನ ಐಸೋಲೇಷನ್ನಲ್ಲಿದ್ದಾರೆ. ಆರ್ಯವೇದ ಆಸ್ಪತ್ರೆಯಲ್ಲಿ 07 ಜನರಿದ್ದಾರೆ. ಜಿಲ್ಲೆಯಲ್ಲಿ ಕಂಟೇನ್ಮೆಂಟ್ ಜೋನ್ ಸಂಖ್ಯೆ 7,127ಕ್ಕೆ ಏರಿಕೆಯಾಗಿದೆ. ಇದರಲ್ಲಿ 5,177 ಝೋನ್ ವಿಸ್ತರಣೆಯಾಗಿದೆ.
ತಾಲೂಕುವಾರು ಸೋಕಿತರ ಸಂಖ್ಯೆ:
ಶಿವಮೊಗ್ಗ-03.
ಭದ್ರಾವತಿ-16.