ಶಿವಮೊಗ್ಗ:ಗುರುವಾರ ರಾತ್ರಿ ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಬಳಿ ಇರುವ ಕಲ್ಲು ಕ್ವಾರಿಯಲ್ಲಿ ಜಿಲೆಟಿನ್ ಸ್ಫೋಟಗೊಂಡ ಪ್ರದೇಶಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಸಂಜೆ ಭೇಟಿ ನೀಡಲಿದ್ದಾರೆ.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್ಗೆ ಬಂದು ನಂತರ ಹುಣಸೋಡು ಕಲ್ಲು ಕ್ವಾರಿ ಸ್ಫೋಟಗೊಂಡ ಸ್ಥಳಕ್ಕೆ ಸಿಎಂ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.