ಬೆಂಗಳೂರು: ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 33 ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 33 ಹುದ್ದೆಗಳ ವಿವರ ಹೀಗಿದೆ.
- ಪ್ರೊಸೆಸ್ ಸರ್ವರ್ - 5
- ಜವಾನ - 28
ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವೇತನ: ಪ್ರೊಸೆಸ್ ಸರ್ವ್ ಹುದ್ದೆಗೆ 19,950-37,900 ರೂ ಮಾಸಿಕ ವೇತನ ಹಾಗೂ ಜವಾನ ಹುದ್ದೆಗೆ 17,000- 28,950 ರೂ ಮಾಸಿಕ ವೇತನ ನಿಗದಿ ಮಾಡಲಾಗಿದೆ.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ಪೂರ್ಣಗೊಂಡಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಹುದ್ದೆಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಹಾಗೂ ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.