ಶಿವಮೊಗ್ಗ:ಸ್ಥಳೀಯ ಸರ್ಕಾರ ಎಂದೇ ಕರೆಯಲ್ಪಡುವ ಗ್ರಾಮ ಪಂಚಾಯತ್ ಸಭೆಯಲ್ಲಿ ಸದಸ್ಯರು ಹೊಡೆದಾಡಿಕೊಂಡ ವಿಡಿಯೋ ವೈರಲ್ ಆಗಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಗ್ರಾಮ ಪಂಚಾಯತ್ನಲ್ಲಿ ನಡೆದ ಸಭೆಯಲ್ಲಿ ಸದಸ್ಯರಿಬ್ಬರು ಹೊಡೆದಾಡಿಕೊಂಡಿದ್ದಾರೆ.
ಸುರೇಶ್ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿದ್ದು, ಪೂರ್ಣೇಶ್ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದಾರೆ. ಹೊಡೆದಾಟದಲ್ಲಿ ಸುರೇಶ್ ತನಗೆ ಗಾಯಗಳಾಗಿವೆ ಎಂದ ತೀರ್ಥಹಳ್ಳಿಯ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದೇ ರೀತಿ ಪೂರ್ಣೇಶ್ ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಕೊಂಡಿದ್ದಾರೆ.