ಕರ್ನಾಟಕ

karnataka

ETV Bharat / state

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಮೈತ್ರಿಯಾಗೇ ಕಾಂಗ್ರೆಸ್​-ಜೆಡಿಎಸ್​ ಸ್ಪರ್ಧೆ

ಶಿವಮೊಗ್ಗದಲ್ಲಿ ಜಿಲ್ಲೆಯಲ್ಲಿ ನಡೆಯಲಿರುವ ಸ್ಥಳೀಯ ಚುನಾವಣೆಯಲ್ಲಿಯೂ ಕಾಂಗ್ರೆಸ್​ ಮತ್ತು ಜೆಡಿಎಸ್​ ಪಕ್ಷಗಳು ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿವೆ.

ಸ್ಥಳೀಯ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ದೋಸ್ತಿ ಪಕ್ಷಗಳ‌ ಸ್ಪರ್ಧೆ

By

Published : May 19, 2019, 6:08 PM IST

ಶಿವಮೊಗ್ಗ:ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪ್ರಯೋಗ ಯಶಸ್ವಿಯಾಗುತ್ತಿರುವ ಹಿನ್ನೆಲೆಯಲ್ಲಿ‌ ಸ್ಥಳೀಯ ಸಂಸ್ಥೆ‌ಯ ಚುನಾವಣೆಯನ್ನೂ ಮೈತ್ರಿಯಾಗಿಯೇ ಸ್ಪರ್ಧಿಸಲು ಕಾಂಗ್ರೆಸ್ - ಜೆಡಿಎಸ್ ಪಕ್ಷಗಳು ನಿರ್ಧರಿಸಿವೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ರಾಷ್ಟ್ರ, ರಾಜ್ಯದ ನಂತರ ಇದೀಗ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಳ್ಳುವ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಗೆ ಸಡ್ಡು ಹೊಡೆಯಲು ಮುಂದಾಗಿದ್ದಾರೆ. ಜಿಲ್ಲೆಯ ಸಾಗರದ ನಗರಸಭೆ, ಶಿಕಾರಿಪುರ ಪುರಸಭೆ, ಶಿರಾಳಕೊಪ್ಪ ಪಟ್ಟಣ ಪಂಚಾಯತ್​ ಹಾಗೂ ಹೊಸನಗರ ಪಟ್ಟಣ ಪಂಚಾಯತ್​​ಗೆ ಮೇ 29 ಕ್ಕೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಳ್ಳಲಾಗಿದೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಸೀಟು ಹಂಚಿಕೆ ವಿವರ ಹೀಗಿದೆ:

ಸಾಗರ ನಗರಸಭೆ 31 ಸ್ಥಾನಗಳಲ್ಲಿ 29 ಸ್ಥಾನ ಕಾಂಗ್ರೆಸ್ , ಜೆಡಿಎಸ್- 02
ಶಿಕಾರಿಪುರ ಪುರಸಭೆ 23 ಸ್ಥಾನಗಳಲ್ಲಿ ಕಾಂಗ್ರೆಸ್- 20, ಜೆಡಿಎಸ್-03.
ಶಿರಾಳಕೊಪ್ಪ ಪಟ್ಟಣ ಪಂಚಾಯತ್​ 17 ಸ್ಥಾನಗಳಲ್ಲಿ ಕಾಂಗ್ರೆಸ್- 13, ಜೆಡಿಎಸ್ 04
ಹೊಸನಗರ ಪಟ್ಟಣ ಪಂಚಾಯತ್​ 11 ಸ್ಥಾನಗಳಲ್ಲಿ ಕಾಂಗ್ರೆಸ್ -06 , ಜೆಡಿಎಸ್-05

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಮೈತ್ರಿ ಪಕ್ಷಗಳ ದೋಸ್ತಿ ಮುಂದುವರಿಕೆ

ಜಿಲ್ಲೆಯಲ್ಲಿ‌ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಗೆದ್ದರೆ, ಸ್ಥಳೀಯ‌ ಸಂಸ್ಥೆ ಹಾಗೂ ರಾಜ್ಯ ಸರ್ಕಾರ ಒಂದೇ ಆಗಿದ್ರೆ ಹೆಚ್ಚಿನ‌ ಅಭಿವೃದ್ದಿ ಮಾಡಲು‌ ಸಾಧ್ಯವಾಗುತ್ತದೆ. ಮುಂದಿನ ಎಲ್ಲಾ ಚುನಾವಣೆಗಳಿಗೆ ಇದು ಭದ್ರ ಬುನಾದಿ ಹಾಕಿಕೊಟ್ಟಂತೆ ಆಗುತ್ತದೆ. ಇದರಿಂದ ಸ್ಥಳೀಯ ಸಂಸ್ಥೆ ಚುನಾವಣೆಯ ಬಗ್ಗೆ ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡಿವೆ ಎಂದು ಹೇಳಲಾಗ್ತಿದೆ.

ಇನ್ನು, ಮೈತ್ರಿ ಮಾಡಿಕೊಳ್ಳುವ ಮುನ್ನ ಎರಡು ಪಕ್ಷಗಳ ಜಿಲ್ಲಾಧ್ಯಕ್ಷರು ತಮ್ಮ ತಮ್ಮ ಕಾರ್ಯಕರ್ತರ ಸಭೆ ನಡೆಸಿ, ಅವರ ಅಭಿಪ್ರಾಯ ಪಡೆದು ಸ್ಥಳೀಯ ಸಂಸ್ಥೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿವೆ. ಜಿಲ್ಲೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮೈತ್ರಿ ಮಾಡಿಕೊಳ್ಳಲಾಗಿದೆ ಎನ್ನುತ್ತಾರೆ ಎರಡು ಪಕ್ಷಗಳ ಜಿಲ್ಲಾಧ್ಯಕ್ಷರುಗಳು.

ABOUT THE AUTHOR

...view details