ಶಿವಮೊಗ್ಗ: ಅನ್ಯ ರಾಜ್ಯ, ಜಿಲ್ಲೆಗಳಿಂದ ಶಿವಮೊಗ್ಗಕ್ಕೆ ಮರಳಿ ಬರುವ ಮೂಲ ನಿವಾಸಿಗಳನ್ನು ನಿಯಮ ಪ್ರಕಾರ ಕ್ವಾರಂಟೈನ್ ಮಾಡಲು ಕ್ವಾರಂಟೈನ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಆದರೆ, ಇದಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿತ್ತು. ಸದ್ಯ ಅವರ ಮನವೊಲಿಸಿ ಕೇಂದ್ರಗಳನ್ನು ಸ್ಥಾಪಿಸಿದ್ದಲ್ಲಿಯೇ ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ತಿಳಿಸಿದ್ದಾರೆ.
ವಿವಿಧೆಡೆಗಳಿಂದ ಬಂದವರನ್ನು ಆಯಾ ತಾಲೂಕಿನ ವಸತಿ ಶಾಲೆ, ಹಾಸ್ಟೆಲ್‌ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ. ಇದಕ್ಕೆ ಮೊದಲು ವಿರೋಧ ವ್ಯಕ್ತಪಡಿಸಿದ ಸ್ಥಳೀಯ ಗ್ರಾಮಸ್ಥರು, ನಿನ್ನೆ ರಾತ್ರಿ ಕ್ವಾರಂಟೈನ್‌ಗೆ ಕರೆ ತಂದ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅನಂತರ ಈ ಬಗ್ಗೆ ಗ್ರಾಮಸ್ಥರಿಗೆ ತಿಳಿ ಹೇಳಲಾಗಿದೆ. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ವರ್ತಿಸದಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದ್ದು, ಸದ್ಯ ಹಲವರು ಸಹಕರಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.