ಶಿವಮೊಗ್ಗ: ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಕೇಂದ್ರವೊಂದರ ಮೇಲೆ ವಿನೋಬ ನಗರ ಪೊಲೀಸರು ದಾಳಿ ನಡೆಸಿ ಏಳು ಮಂದಿ ಯುವತಿಯರನ್ನು ರಕ್ಷಿಸಿದ್ದಾರೆ. ಪೊಲೀಸ್ ಚೌಕಿ ಬಳಿಯ ಕಟ್ಟಡವೊಂದರಲ್ಲಿ ಕಾನೂನುಬಾಹಿರ ಕೃತ್ಯ ನಡೆಯುತ್ತಿದ್ದ ಖಚಿತ ಮಾಹಿತಿ ಆಧರಿಸಿ ಶೋಧ ನಡೆಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಐಪಿಎಸ್ ಪ್ರೊಬೇಷನರಿ ಅಧಿಕಾರಿ ಬಿಂದುಮಣಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಸ್ಪಾ ಮಾಲೀಕ ಪರಾರಿಯಾಗಿದ್ದಾನೆ. ಆತನ ಶೋಧಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಪಾ ಹೆಸರಿನಲ್ಲಿ ಅಕ್ರಮ- ಖಾಕಿ ಪಡೆ ಅಲರ್ಟ್: ಕಳೆದ ತಿಂಗಳು ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿನ ಸ್ಪಾ ಕೇಂದ್ರದ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಅಲ್ಲಿಯೂ ಸಹ ಇದೇ ದಂಧೆ ನಡೆಸಲಾಗುತ್ತಿತ್ತು. ಮೂವರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದರು. ತೀರ್ಥಹಳ್ಳಿಯ ಮನೆಯೊಂದರ ಮೇಲೂ ದಾಳಿ ನಡೆಸಿ ಮೂವರು ಯುವತಿಯರನ್ನು ರಕ್ಷಿಸಲಾಗಿತ್ತು. ಹೀಗೆ ಹಲವೆಡೆ ಸ್ಪಾ ಹೆಸರಿನಲ್ಲಿ ಅಕ್ರಮ ಚಟುವಟಿಕೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಪೊಲೀಸರು ಅಲರ್ಟ್ ಆಗಿದ್ದು, ವಿವಿಧೆಡೆ ಶೋಧ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ; ಮಾದನಾಯಕನಹಳ್ಳಿ ಪೊಲೀಸರಿಂದ ಆರೋಪಿಗಳ ಬಂಧನ
ಸ್ಪಾದಲ್ಲಿ ವೇಶ್ಯಾವಾಟಿಕೆ ದಂಧೆ: ಇತ್ತೀಚೆಗೆಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಸಲೂನ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಸಲೂನ್ ಮಾಲೀಕರನ್ನು ಬಂಧಿಸಿ, 6 ಜನ ಮಹಿಳೆಯರನ್ನು ರಕ್ಷಿಸಿದ್ದರು. ಕುವೆಂಪು ರಸ್ತೆಯ ಸಾಯಿ ಆರ್ಕೇಡ್ ಕಟ್ಟಡದ ರಾಯಲ್ ಆರ್ಚ್ ಫ್ಯಾಮಿಲಿ ಸಲೂನ್ ಮತ್ತು ಸ್ಪಾನಲ್ಲಿ ಸ್ಪಾ ಹೆಸರಿನಲ್ಲಿ ಮಹಿಳೆಯನ್ನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಮಹಿಳಾ ಪೊಲೀಸರು ದಾಳಿ ನಡೆಸಿದ್ದರು.
ರಕ್ಷಿಸಲಾದ 6 ಜನ ಮಹಿಳೆಯರಿಗೆ ಸ್ಪಾ ಮಾಲೀಕರಾದ ಗೋಪಾಲ್ ವೈ ಮತ್ತು ವಿದ್ಯಾಶ್ರೀ ಎಂಬವರು ಹಣದ ಆಮಿಷ ತೋರಿಸಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ರಕ್ಷಿಸಲ್ಪಟ್ಟ ಎಲ್ಲ ಮಹಿಳೆಯರು ಬೇರೆ ಬೇರೆ ರಾಜ್ಯದವರು ಎಂದು ತಿಳಿದು ಬಂದಿತ್ತು. ರಾಯಲ್ ಆರ್ಚ್ ಫ್ಯಾಮಿಲಿ ಸಲೂನ್ ಮತ್ತು ಸ್ಪಾ ಇತ್ತೀಚೆಗೆ ಪ್ರಾರಂಭವಾಗಿತ್ತು. ಸ್ಪಾ ಶುರುವಾದದಿಂದಲೂ ಅನುಮಾನಾಸ್ಪದವಾಗಿ ನಡೆದುಕೊಳ್ಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ. ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿತ ದಂಪತಿಯನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.
ಇದನ್ನೂ ಓದಿ:15 ದಿನದ ಹಿಂದಷ್ಟೇ ಆರಂಭವಾಗಿದ್ದ ಸ್ಪಾದಲ್ಲಿ ವೇಶ್ಯಾವಾಟಿಕೆ ದಂಧೆ: ಶಿವಮೊಗ್ಗದಲ್ಲಿ 6 ಯುವತಿಯರ ರಕ್ಷಣೆ, ದಂಪತಿ ಬಂಧನ