ಶಿವಮೊಗ್ಗ: ಮುಖ್ಯಮಂತ್ರಿಗಳ ತವರು ಜಿಲ್ಲೆ ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಗರವನ್ನು ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಆದರೆ ಇದೇ ಸ್ಮಾರ್ಟ್ ಸಿಟಿ ಕಾಮಗಾರಿಗಳು ಇಂದು ನಗರದ ಜನರಿಗೆ ಕಿರಿಕಿರಿ ಉಂಟು ಮಾಡಿದೆ.
ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿ ಅವಾಂತರ: ಸಾರ್ವಜನಿಕರ ಆಕ್ರೋಶ
ನಗರದಲ್ಲಿ ಸ್ಮಾರ್ಟ್ ಸಿಟಿಯ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳಿಂದ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.
ಸ್ಮಾರ್ಟ್ ಸಿಟಿ ಕಾಮಗಾರಿ ಅವಾಂತರ
ಮಳೆಗಾಲ ಆರಂಭಕ್ಕೂ ಮುನ್ನ ಸಾಕಷ್ಟು ಕಾಲಾವಕಾಶಗಳು ಇದ್ದರೂ ಸಹ ಪಾಲಿಕೆ ಹಾಗು ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಪ್ರಾರಂಭಿಸದೆ ಮಳೆಗಾಲ ಆರಂಭವಾದ ನಂತರ ಕಾಮಗಾರಿ ಪ್ರಾರಂಭಿಸಿ ನಗರದೆಲ್ಲೆಡೆ ಗುಂಡಿಗಳನ್ನು ಅಗೆದು ಹಾಗೇ ಬಿಡಲಾಗಿದೆ .
ಇದರ ಪರಿಣಾಮ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಮಳೆ ನೀರು ಗುಂಡಿಗಳಲ್ಲಿ ನಿಂತು ತೊಂದರೆಯಾಗಿದೆ. ಈ ಕೂಡಲೇ ನಗರದಾದ್ಯಂತ ತೆಗೆದಿರುವ ಗುಂಡಿಗಳನ್ನು ಮುಚ್ಚಿ, ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.