ಶಿವಮೊಗ್ಗ: ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳನ್ನು ಆದಷ್ಟು ಬೇಗನೇ ಮುಗಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಪಟ್ಟಣದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ವೀಕ್ಷಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿ ಆದಷ್ಟು ಬೇಗ ಮುಗಿಸುತ್ತೇವೆ: ಸಚಿವ ಕೆ.ಎಸ್. ಈಶ್ವರಪ್ಪ - ಕಾಮಗಾರಿಗಳನ್ನು ಪರೀಶೀಲನೆ
ಸ್ಮಾರ್ಟ್ ಸಿಟಿ ಕಾಮಗಾರಿಗಳು ತುಂಬಾ ನಿಧಾನಗತಿಯಲ್ಲಿ ನಡೆಯುತ್ತಿದ್ದವು. ಕಾಮಗಾರಿಗಳನ್ನು ಪರೀಶೀಲನೆ ನಡೆಸಿ ಟಾರ್ಗೆಟ್ ನೀಡಿ ಅವಧಿಯೊಳಗೆ ಮುಗಿಸುವಂತೆ ಎಚ್ಚರಿಸಲಾಗಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.
ಸಚಿವ ಈಶ್ವರಪ್ಪ
ಸ್ಮಾರ್ಟ್ ಸಿಟಿ ಕಾಮಗಾರಿಗಳು ತುಂಬಾ ನಿಧಾನಗತಿಯಲ್ಲಿ ನಡೆಯುತ್ತಿದ್ದವು. ಕಾಮಗಾರಿಗಳನ್ನು ಪರೀಶೀಲನೆ ನಡೆಸಿ ಟಾರ್ಗೆಟ್ ನೀಡಿ ಅವಧಿಯೊಳಗೆ ಮುಗಿಸುವಂತೆ ಎಚ್ಚರಿಸಲಾಗಿದೆ. ಗುಣಮಟ್ಟದ ಜೊತೆಗೆ ಆದಷ್ಟು ಬೇಗ ಕಾಮಗಾರಿಗಳನ್ನು ಮುಗಿಸುತ್ತೇವೆ ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಠಾರೆ, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಸೇರಿದಂತೆ ಇತರ ಅಧಿಕಾರಿಗಳು ಮತ್ತು ಮಹಾನಗರ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.
Last Updated : Aug 23, 2021, 4:27 PM IST