ಶಿವಮೊಗ್ಗ: ಶರಾವತಿ ಸಂತ್ರಸ್ತರ ಪರ ಬಿಜೆಪಿ ಸರ್ಕಾರ ಮೊಸಳೆ ಕಣ್ಣೀರು ಹಾಕ್ತಾ ಇದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿ ಕಾಂಗ್ರೆಸ್ನಿಂದ ಆಯೋಜಿಸಿದ್ದ ಶರಾವತಿ ಸಂತ್ರಸ್ತರ ಪರ ಜನಾಕ್ರೋಶ ಪಾದಯಾತ್ರೆ ಸಮಾವೇಶದಲ್ಲಿ ಭಾಗಿಯಾಗಲು ಆಗಮಿಸಿ, ಮಾತನಾಡಿದ ಅವರು, ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಪಾದಯಾತ್ರೆ ನಡೆಸಲಾಗಿದೆ. ಈಗ ಡಬಲ್ ಇಂಜಿನ್ ಸರ್ಕಾರ ಇದೆ. ಅವರು ಈಗ ಹಕ್ಕು ಪತ್ರ ನೀಡಲಿ ಎಂದು ಆಗ್ರಹಿಸಿದರು.
ನಮ್ಮ ಸರ್ಕಾರದ ಅವಧಿಯಲ್ಲಿ ನಿರಾಶ್ರಿತರಿಗಾಗಿ ಡಿನೋಟಿಫಿಕೇಷನ್ ಮಾಡಿ ಹಕ್ಕು ಪತ್ರ ನೀಡಲಾಗಿತ್ತು. ಆದರೆ ಯಾರೋ ಒಬ್ಬರು ಕೋರ್ಟ್ಗೆ ಹೋಗಿದ್ದಾರೆ ಎಂದು ಹೇಳಿ ಡಿನೋಟಿಫಿಕೇಷನ್ ರದ್ದು ಮಾಡಿದ್ದು ಬಿಜೆಪಿ ಸರ್ಕಾರ. ಇದರಿಂದ ಅವರೇ ಈಗ ಹಕ್ಕುಪತ್ರವನ್ನು ನೀಡಬೇಕೆಂದು ಆಗ್ರಹಿಸಿದರು.