ಶಿವಮೊಗ್ಗ :ಕೊರೊನಾ ವಿಚಾರದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲಬೇಕೆ ಹೊರತು, ಆರೋಪ ಮಾಡುವುದರಲ್ಲಿಯೇ ಕಾಲ ಕಳೆಯಬಾರದು ಎಂದು ಸಿದ್ದರಾಮಯ್ಯನವರಿಗೆ ಸಚಿವ ಈಶ್ಚರಪ್ಪ ಟಾಂಗ್ ನೀಡಿದ್ದಾರೆ.
ಮೈಸೂರಿನಲ್ಲಿ ಸಿದ್ದರಾಮಯ್ಯನವರು ಸರ್ಕಾರ ಕೊರೊನಾ ಕಿಟ್ ಖರೀದಿಯಲ್ಲಿ ಹಗರಣ ನಡೆಸಿದೆ ಎಂದು ಹೇಳಿದ್ದರು. ಇದಕ್ಕೆ ಉತ್ತರಿಸಿದ ಸಚಿವ ಈಶ್ವರಪ್ಪ, ಸಿದ್ದರಾಮಯ್ಯನವರು ಸಹ ಸಿಎಂ ಆಗಿದ್ದವರು. ಕೊರೊನಾದ ವಿಚಾರದಲ್ಲಿ ರಾಜ್ಯ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರವೇ ಹೇಳಿದೆ. ಈಗ ಸಿದ್ದರಾಮಯ್ಯನವರು ತಮ್ಮ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಲಿ, ಅದನ್ನು ಬಿಟ್ಟು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಬಾರದು ಎಂದರು.