ಕರ್ನಾಟಕ

karnataka

ETV Bharat / state

ವಚನಕಾರ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ - Siddarameshwara Jayanti in Shivayogi

ಶಿವಮೊಗ್ಗದಲ್ಲಿ ಶಿವಯೋಗಿ ಸಿದ್ದರಾಮೇಶ್ವರರ ಜಯಂತಿಯನ್ನು ಆಚರಿಸಲಾಯಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜನೆ.

Siddarameshwara Jayanti in Shivayogi
ವಚನಕಾರ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

By

Published : Jan 15, 2020, 6:39 AM IST

ಶಿವಮೊಗ್ಗ:ಸಿದ್ದರಾಮೇಶ್ವರವರುಕಾಯಕದ ಜೊತೆ ಸಾಹಿತ್ಯಕ್ಕೂ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕಿ ಡಾ.ಶುಭಾ ಮರವಂತೆ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆದ ಶಿವಶರಣ ಹಾಗೂ ವಚನಕಾರ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ವಚನಕಾರ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

ಶಾಸ್ತ್ರ, ಪುರಾಣ ಮತ್ತು ವೇದ ಹಾಗೂ ತರ್ಕ ವಿರೋಧಿಸಿ ಶಿವಯೋಗಿ ಸಿದ್ದರಾಮೇಶ್ವರರು ಜನರಿಗೆ ಪ್ರಯೋಜನಕಾರಿಯಾಗುವ ಕೆರೆ, ಕಟ್ಟೆ, ಬಾವಿಗಳ ನಿರ್ಮಾಣಕ್ಕೆ ಮುಂದಾದವರು. ಕಲ್ಯಾಣಾಭಿವೃದ್ಧಿಗೆ ಶ್ರಮಿಸಿದವರು ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಜಿಲ್ಲಾ ಪಂಚಾಯತ್ ಸದಸ್ಯ ವೀರಭದ್ರ ಪೂಜಾರಿ ಮಾತನಾಡಿ 12ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾದದು. ಅಸಮಾನತೆ, ವರ್ಣ, ಜಾತಿ, ಲಿಂಗಬೇಧವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು. ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಮೂರನೇ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘ ಅಧ್ಯಕ್ಷ ಎಸ್.ರವಿಕುಮಾರ್, ಮಹಾನಗರ ಪಾಲಿಕೆ ಉಪ ಮಹಾಪೌರರು ಎಸ್.ಎನ್.ಚನ್ನಬಸಪ್ಪ, ತಾ.ಪಂ. ಅಧ್ಯಕ್ಷೆ ಗೀತಾ ಜಯಶೇಖರ್, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಇದ್ದರು.

ABOUT THE AUTHOR

...view details