ಶಿವಮೊಗ್ಗ:ರಾಜ್ಯ ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಈ ಬಾರಿ ದಸರಾ ಹಬ್ಬವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಮೈಸೂರು ಜಿಲ್ಲೆ ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ನೂರು ಜನಕ್ಕಿಂತ ಹೆಚ್ಚು ಜನ ಭಾಗವಹಿಸದಂತೆ ಆದೇಶ ಹೊರಡಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಠಾರೆ ತಿಳಿಸಿದರು.
ಸರ್ಕಾರದ ಆದೇಶದ ಅನ್ವಯ ಜಿಲ್ಲೆಯಲ್ಲಿ ಸರಳ ದಸರಾ ಆಚರಣೆ: ಚಿದಾನಂದ ವಠಾರೆ - Simple Dussehra celebration in shimoga
ಈ ಬಾರಿಯ ಸರಳ ದಸರಾ ಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸುವ ನೂರು ಜನರು ಕಡ್ಡಾಯವಾಗಿ ಸರ್ಕಾರದ ಕೋವಿಡ್ ನಿಯಮಗಳನ್ನು ಪಾಲಿಸಬೇಕು, ಹಾಗೂ ಸಾಮಾಜಿಕ ಅಂತರ ಮತ್ತು ಮಾಸ್ಕ್ ಗಳನ್ನು ಧರಿಸಬೇಕು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಠಾರೆ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು, ಈ ಬಾರಿಯ ಸರಳ ದಸರಾ ಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸುವ ನೂರು ಜನರು ಕಡ್ಡಾಯವಾಗಿ ಸರ್ಕಾರದ ಕೋವಿಡ್ ನಿಯಮಗಳನ್ನು ಪಾಲಿಸಬೇಕು, ಹಾಗೂ ಸಾಮಾಜಿಕ ಅಂತರ ಮತ್ತು ಮಾಸ್ಕ್ ಗಳನ್ನು ಧರಿಸಬೇಕು ಎಂದರು.
ದಸರಾ ಹಬ್ಬದ ಬನ್ನಿ ಮುಡಿಯುವ ಕಾರ್ಯಕ್ರಮವನ್ನು ವಿವಿದ ವಿದ್ಯುನ್ಮಾನ ಯಂತ್ರಗಳ ಮೂಲಕ ಪ್ರಸಾರ ಮಾಡುವ ಜೊತೆಗೆ ಡಿಜಿಟಲ್ ಡಿಸ್ ಪ್ಲೇ ಬೋರ್ಡ್ ಹಾಗೂ ಸ್ಥಳೀಯ ಸುದ್ದಿ ವಾಹಿನಿಗಳಲ್ಲಿ ನೇರ ಪ್ರಸಾರ ಮಾಡಲಾಗುವುದು. ಹಾಗಾಗಿ, ಜನರು ಮನೆಯಿಂದಲೇ ಬನ್ನಿ ಮುಡಿಯುವ ಕಾರ್ಯಕ್ರಮವನ್ನು ವೀಕ್ಷಿಸಬಹುದು ಎಂದ ಅವರು, ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.