ಕರ್ನಾಟಕ

karnataka

ETV Bharat / state

ಶಿವಮೊಗ್ಗ: ಈಶ್ವರಪ್ಪ ಭರವಸೆ ಮೇರೆಗೆ ಪ್ರತಿಭಟನೆ ಹಿಂಪಡೆದ ಸಿಮ್ಸ್ ಹೊರಗುತ್ತಿಗೆ ನೌಕರರು

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಕಾರ್ಮಿಕರ ಸಮಸ್ಯೆ ಆಲಿಸಿದರು. ಪ್ರತಿಭಟನೆಯನ್ನು ಬೇಕಾಬಿಟ್ಟಿ ನಡೆಸಬಾರದು, ಕೋವಿಡ್ ಸಂದರ್ಭದಲ್ಲಿ ಮೊದಲೇ ನಡೆಸಬಾರದಿತ್ತು. ಒಂದು ವೇಳೆ ಡಿಸಿ ಅವರು ಬಂದು ನೀವೆಲ್ಲ ನಾಳೆಯಿಂದ ಕೆಲಸಕ್ಕೆ ಬರಬೇಡಿ ಎಂದರೆ, ಹೊಟ್ಟೆ ಮೇಲೆ ತಣ್ಣಿರು ಬಟ್ಟೆ ಹಾಕಿ ಕೊಳ್ಳುತ್ತೀರಾ ಎಂದು ಪ್ರಶ್ನೆ ಮಾಡಿದರು.

ಹೊರಗುತ್ತಿಗೆ ನೌಕರರು
ಹೊರಗುತ್ತಿಗೆ ನೌಕರರು

By

Published : Sep 30, 2020, 7:26 PM IST

ಶಿವಮೊಗ್ಗ:ತಮ್ಮನ್ನು ಸಿಮ್ಸ್ ಕಾಲೇಜ್​ನ ಒಳಗುತ್ತಿಗೆ ನೌಕರರನ್ನಾಗಿ ನೇಮಕ ಮಾಡಿಕೊಳ್ಳಬೇಕು ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿ ಕಳೆದ 9 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಹೊರಗುತ್ತಿಗೆ ಕಾರ್ಮಿಕರ ಪ್ರತಿಭಟನೆ ಇಂದು ಮುಕ್ತಾಯವಾಗಿದೆ.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಕಾರ್ಮಿಕರ ಸಮಸ್ಯೆಯನ್ನು ಆಲಿಸಿದರು. ಪ್ರತಿಭಟನೆಯನ್ನು ಬೇಕಾಬಿಟ್ಟಿ ನಡೆಸಬಾರದು, ಕೋವಿಡ್ ಸಂದರ್ಭದಲ್ಲಿ ಮೊದಲೇ ನಡೆಸಬಾರದಿತ್ತು. ಒಂದು ವೇಳೆ, ಡಿಸಿ ಅವರು ಬಂದು ನೀವೆಲ್ಲ ನಾಳೆಯಿಂದ ಕೆಲಸಕ್ಕೆ ಬರಬೇಡಿ ಎಂದರೆ, ಹೊಟ್ಟೆ ಮೇಲೆ ತಣ್ಣಿರು ಬಟ್ಟೆ ಹಾಕಿ ಕೊಳ್ಳುತ್ತೀರಾ ಎಂದು ಪ್ರಶ್ನೆ ಮಾಡಿದರು.

ಪ್ರತಿಭಟನೆ ಹಿಂಪಡೆದ ಸಿಮ್ಸ್ ಹೊರಗುತ್ತಿಗೆ ನೌಕರರು

ನಿಮ್ಮ ಜೊತೆ ನಾನಿರುತ್ತೇನೆ. ನಿಮಗೆ ಅನ್ಯಾಯವಾಗಲು ಬಿಡಲ್ಲ. ನಾಳೆ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ, ನಿಮಗೆ ನ್ಯಾಯ‌ ಒದಗಿಸುವ ಜವಾಬ್ದಾರಿ ನಮ್ಮದು. ಪ್ರತಿಭಟನೆ ನಡೆಸದೇ ಕರ್ತವ್ಯಕ್ಕೆ ಹಾಜರಾಗಿ ಎಂದು ಸೂಚಿಸಿದರು. ಸಚಿವರ ಭರವಸೆಯ ಮೇರೆಗೆ ಪ್ರತಿಭಟನೆ ವಾಪಸ್ ಪಡೆದರು.

ABOUT THE AUTHOR

...view details