ಶಿವಮೊಗ್ಗ:ನಾಡಿನ ಪ್ರಸಿದ್ಧ ಯಾತ್ರಾ ಸ್ಥಳ ಸಿಗಂದೂರಿನ ಚೌಡೇಶ್ವರಿ ದೇವಿಯ ದರ್ಶನವನ್ನು ವಾರಾಂತ್ಯದಲ್ಲಿ ಬಂದ್ ಮಾಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ದೇವಾಲಯದ ಆಡಳಿತ ಮಂಡಳಿ ಈ ಕ್ರಮ ತೆಗೆದುಕೊಂಡಿದೆ.
ಕೋವಿಡ್ ನಿಯಂತ್ರಣ ಮಾಡುವ ಉದ್ದೇಶದಿಂದ ಜಿಲ್ಲಾಡಳಿತವು ಪ್ರವಾಸಿತಾಣಗಳು ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿ ನಿಗದಿ ಮಾಡಿದೆ. ಇದರಿಂದ ಸಿಗಂದೂರಿಗೆ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ದೇವಾಲಯದ ಧರ್ಮದರ್ಶಿ ಡಾ.ರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.