ಶಿವಮೊಗ್ಗ:ದೇಶವೇ ಲಾಕ್ಡೌನ್ ಆಗಿರುವ ಕಾರಣ ಸರ್ಕಾರಗಳು ಜನರ ನೋವಿಗೆ ಸ್ಪಂದಿಸುತ್ತಿವೆ. ಇದರ ಜೊತೆಗೆ ರಾಜ್ಯದ ಹಲವು ದಾನಿಗಳು ತಮ್ಮ ಕೈಲಾದಷ್ಟು ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುತ್ತಿದ್ದಾರೆ. ಅದರಂತೆ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಚೇರಿಯ ಸಿಬ್ಬಂದಿ ತಮ್ಮ ಒಂದು ದಿನದ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡುವ ಮೂಲಕ ಮಾದರಿಯಾಗಿದ್ದಾರೆ.
ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ದಿನದ ಸಂಬಳ ನೀಡಿದ ಶಿವಮೊಗ್ಗ ಸ್ಮಾರ್ಟ್ ಸಿಟಿ ಸಿಬ್ಬಂದಿ - ಶಿವಮೊಗ್ಗ ಸ್ಮಾರ್ಟ್ ಸಿಟಿ
ಲಾಕ್ಡೌನ್ ವಿರುದ್ಧದ ಹೋರಾಟಕ್ಕೆ ಇಡೀ ದೇಶವೇ ಕೈ ಜೋಡಿಸಿದೆ. ಈ ನಡುವೆ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಚೇರಿಯ ಸಿಬ್ಬಂದಿ ಸಿಎಂ ಪರಿಹಾರ ನಿಧಿಗೆ ತಮ್ಮ ಒಂದು ದಿನದ ವೇತನವನ್ನು ದೇಣಿಗೆಯಾಗಿ ನೀಡಿದ್ದಾರೆ. ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಸ್ಮಾರ್ಟ್ ಸಿಟಿ ಎಂಡಿ ಆಗಿರುವ ಚಿದಾನಂದ ವಟಾರೆ ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ಚೆಕ್ ಹಸ್ತಾಂತರಿಸಿದ್ದಾರೆ.
ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ದಿನದ ಸಂಬಳ ನೀಡಿದ ಸ್ಮಾರ್ಟ್ ಸಿಟಿ ಸಿಬ್ಬಂದಿ
ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಸ್ಮಾರ್ಟ್ ಸಿಟಿ ಎಂಡಿ ಆಗಿರುವ ಚಿದಾನಂದ ವಟಾರೆ ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ಚೆಕ್ ನೀಡಿದರು. ಈ ಸಂದರ್ಭದಲ್ಲಿ ಸ್ಮಾರ್ಟ್ ಸಿಟಿ ಸಿಬ್ಬಂದಿ ಉಪಸ್ಥಿತರಿದ್ದರು.