ಶಿವಮೊಗ್ಗ:ಸ್ಮಾರ್ಟ್‍ಸಿಟಿ ಕಾಮಗಾರಿ ಅನುಷ್ಟಾನ ಕುರಿತಂತೆ ಪಾರ್ಕ್ ಅಭಿವೃದ್ಧಿ ಕಾಮಗಾರಿಗಳ ಪರೀಶೀಲನೆಯನ್ನು ಶಿವಮೊಗ್ಗ ನಗರದ ಗುಂಡಪ್ಪ ಶೆಡ್‍ನಲ್ಲಿ ಬುಧವಾರ ಶಾಸಕ ಹಾಗೂ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಪರಿಶೀಲನೆ ನಡೆಸಿದರು. ಪಾಲಿಕೆ ಆಯುಕ್ತೆ ಹಾಗೂ ಯೋಜನೆ ವ್ಯವಸ್ಥಾಪಕ ನಿರ್ದೇಶಕಿ ಚಾರುಲತಾ ಸೋಮಲ್ ಅವರ ಜೊತೆಗೂಡಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲಿಸಿದ ಅವರು, ಸ್ಮಾರ್ಟ್‍ಸಿಟಿಗೆ ಸಂಬಂಧಿಸಿದ ಕಾಮಗಾರಿಗಳು ಯಾವುದೇ ರೀತಿಯ ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಶಿವಮೊಗ್ಗದಲ್ಲಿ ಚುರುಕು ಪಡೆದಿದೆ ಸ್ಮಾರ್ಟ್‍ಸಿಟಿ ಕಾಮಗಾರಿ... ನಗರ ಶಾಸಕರಿಂದ ಪರಿಶೀಲನೆ ಜೋರು - ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ
ಸ್ಮಾರ್ಟ್‍ಸಿಟಿ ಕಾಮಗಾರಿ ಅನುಷ್ಟಾನ ಕುರಿತಂತೆ ಪಾರ್ಕ್ ಅಭಿವೃದ್ಧಿ ಕಾಮಗಾರಿಗಳ ಪರೀಶೀಲನೆಯನ್ನು ಶಿವಮೊಗ್ಗ ನಗರದ ಗುಂಡಪ್ಪ ಶೆಡ್‍ನಲ್ಲಿ ಬುಧವಾರ ಶಾಸಕ ಹಾಗೂ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಪರಿಶೀಲನೆ ನಡೆಸಿದರು.
ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ
ಈ ವೇಳೆ ಮಾತನಾಡಿದ ಪಾಲಿಕೆ ಆಯುಕ್ತೆ ಹಾಗೂ ಯೋಜನೆಯ ವ್ಯವಸ್ಥಾಪಕ ನಿರ್ದೇಶಕಿ ಚಾರುಲತಾ ಸೋಮಲ್, ಈಗಾಗಲೇ ಕಾಮಗಾರಿಗೆ ಸಂಬಂಧಿಸಿದಂತೆ ಸುಮಾರು 28 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಗಳು ವೇಗದಲ್ಲಿ ನಡೆಯುತ್ತಿವೆ. ಚರಂಡಿ, ವಾಟರ್ ಪೈಪ್, ರಸ್ತೆ, ಯುಜಿಡಿ ಮುಂತಾದ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಂದುವರಿಸಲಾಗುವುದು ಎಂದ ಅವರು, ಈ ಎಲ್ಲ ಅನುಷ್ಟಾನಗಳಿಗೆ ಸಾರ್ವಜನಿಕರ ಸಹಕಾರವೂ ಬೇಕು ಎಂದರು.