ಕರ್ನಾಟಕ

karnataka

ETV Bharat / state

ಶಿಕ್ಷಣಕ್ಕೆ ಒತ್ತು ನೀಡಿದ್ರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ.. ಸಚಿವ ಸುರೇಶ್ ಕುಮಾರ್

ಶಿಕಾರಿಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಿರ್ಮಿಸಿರುವ 22 ಶಾಲಾ ಕೊಠಡಿಗಳನ್ನು ಲೋಕಾರ್ಪಣೆ ಮತ್ತು ಚಿಕ್ಕಮಾಗಡಿಯ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಪಾಲ್ಗೊಂಡರು.

By

Published : Jan 18, 2020, 8:37 PM IST

social-development-can-only-be-done-with-emphasis-on-education-said-by-minister-suresh-kumar
social-development-can-only-be-done-with-emphasis-on-education-said-by-minister-suresh-kumar

ಶಿವಮೊಗ್ಗ: ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು ನೀಡುವ ಸಮಾಜ, ಅಭಿವೃದ್ಧಿ ಹೊಂದಿದ ಸಮಾಜವಾಗುವುದರಲ್ಲಿ ಸಂದೇಹವಿಲ್ಲ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಜಿಲ್ಲೆಯ ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿಯ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬಳಿಕ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಿರ್ಮಿಸಿರುವ 22 ಶಾಲಾ ಕೊಠಡಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ರಾಜ್ಯದ ಮುಂದಿನ ಸಂಗತಿಗಳು ನಿಂತಿವೆ. ವಿಶೇಷವಾಗಿ ಮಾನ್ಯ ಪ್ರಧಾನಮಂತ್ರಿ ನರೇಂದ್ರಮೋದಿಯವರು ಕಳೆದು ಮೂರು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಪರೀಕ್ಷೆ ಪೇ ಚರ್ಚಾ ಎಂಬ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳೊಂದಿಗಿನ ಸಮಾಲೋಚನೆ ಕಾರ್ಯಕ್ರಮಕ್ಕೆ ರಾಜ್ಯದ 42 ವಿದ್ಯಾರ್ಥಿಗಳು, ಅದರಲ್ಲೂ ರಾಜ್ಯದ ಸರ್ಕಾರಿ ಶಾಲೆಯ 27ವಿದ್ಯಾರ್ಥಿಗಳು ಆಯ್ಕೆಯಾಗಿರುವುದು ವಿಶೇಷ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಿಕ್ಷಣಕ್ಕೆ ಒತ್ತು ನೀಡಿದರೆ ಮಾತ್ರ ಸಮಾಜ ಅಭಿವೃದ್ಧಿ ಸಾಧ್ಯ: ಸಚಿವ ಸುರೇಶ್ ಕುಮಾರ್

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಸಾರ್ವಜನಿಕರು ಸರದಿ ಸಾಲಿನಲ್ಲಿ ನಿಂತು ತಮ್ಮ ಮಕ್ಕಳನ್ನು ದಾಖಲಿಸುವ ವಾತಾವರಣ ನಿರ್ಮಾಣವಾಗಲಿದೆ ಎಂದರು. ಶಾಲೆಗಳ ದಾಖಲಾತಿಗೆ ಪೋಷಕರು ನೀಡುತ್ತಿರುವ ಲಕ್ಷಾಂತರ ರೂಪಾಯಿಗಳ ಡೊನೇಶನ್ ಹಾವಳಿ ಅಂತ್ಯಗೊಳ್ಳಲಿದೆ. ಸರ್ಕಾರಿ ಶಾಲೆಗಳಿಗೆ ದಾಖಲಾಗುವ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಇನ್ನಷ್ಟು ಕೊಠಡಿಗಳು ನಿರ್ಮಾಣಗೊಳ್ಳಲಿವೆ. ಆಗ ಸಹಜವಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕೆಂಬ ಪೋಷಕರ ಆಶಯ ಈಡೇರಲಿದೆ ಎಂದರು.

ಜಿಲ್ಲೆಯಲ್ಲಿ ಎಸ್.ಎಸ್‌.ಎಲ್.ಸಿ. ಪರೀಕ್ಷಾ ಫಲಿತಾಂಶ ಹೆಚ್ಚಿಸುವಲ್ಲಿ ಶಾಲಾ ಶಿಕ್ಷಕರು ಮಕ್ಕಳ ಕಡೆಗೆ ವಿಶೇಷ ಗಮನಹರಿಸುತ್ತಿದ್ದಾರೆ. ಮಾತ್ರವಲ್ಲ ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳ ಮನೆಗೆ ತೆರಳಿ ಶಿಕ್ಷಣದ ಕುರಿತು ಅರಿವು ಮೂಡಿಸುತ್ತಿದ್ದಾರೆ ಎಂದ ಅವರು ಶಿಕ್ಷಕರು ಮತ್ತು ಪೋಷಕರು ಮಕ್ಕಳಿಗೆ ಪ್ರೋತ್ಸಾಹಿಸಿ. ಅವರನ್ನು ಪ್ರೀತಿಯಿಂದ ಕಾಣಬೇಕು. ಇದರಲ್ಲಿ ರಾಜ್ಯದ ಭವಿಷ್ಯ ಅಡಗಿದೆ ಎಂದು ಕಿವಿ ಮಾತು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ತಾಲೂಕಿನ 72 ಗ್ರಾಮಗಳ ಸರ್ಕಾರಿ ಶಾಲೆಗಳಿಗೆ 104ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು, ಇಂದು 22 ಕೊಠಡಿಗಳನ್ನು ಉದ್ಘಾಟನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಮಳೆಯಿಂದ ಬಾಧಿತವಾಗಿರುವ ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿಗೆ ಸರ್ಕಾರ 34ಕೋಟಿ ರೂ.ಗಳ ಅನುದಾನ ಮಂಜೂರು ಮಾಡಿದೆ. ಆ ಪೈಕಿ ತಾಲೂಕಿನ 84 ಹಿರಿಯ ಮತ್ತು ಕಿರಿಯ ಶಾಲೆಗಳು ಹಾಗೂ 05 ಪ್ರೌಢಶಾಲೆಗಳು ಸೇರಿವೆ. ತಾಲೂಕಿನ ಸುಮಾರು 6000ವಿದ್ಯಾರ್ಥಿಗಳು ವಸತಿ ಶಾಲೆಯ ಸೌಲಭ್ಯ ಪಡೆಯುತ್ತಿದ್ದು, ಪ್ರತಿ ವಿದ್ಯಾರ್ಥಿಗೆ ಮಾಹೆಯಾನ 25ಸಾವಿರ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ ಎಂದು ತಿಳಿಸಿದರು.

ABOUT THE AUTHOR

...view details