ಕರ್ನಾಟಕ

karnataka

ETV Bharat / state

ನವ್ಯಶ್ರೀಯನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ದ ಎಪಿಎಂಸಿ ಪೊಲೀಸರು

ಬ್ಲ್ಯಾಕ್​ಮೇಲ್​ ಆರೋಪ- ಎಪಿಎಂಸಿ ಠಾಣೆ ಪೊಲೀಸರೆದುರು ವಿಚಾರಣೆಗೆ ಹಾಜರಾದ ನವ್ಯಶ್ರೀ- ತೋಟಗಾರಿಕೆ ಇಲಾಖೆ ಅಧಿಕಾರಿ ಟಾಕಳೆ ನೀಡಿದ ದೂರಿನ ಸಂಬಂಧ ವಿಚಾರಣೆ

social-worker-navyasree-rao-present-at-belagavi-apmc-station
ಬೆಳಗಾವಿ ಎಪಿಎಂಸಿ ಪೊಲೀಸರೆದುರು​​ ವಿಚಾರಣೆಗೆ ಹಾಜರಾದ ನವ್ಯಶ್ರೀ ರಾವ್

By

Published : Jul 25, 2022, 1:50 PM IST

Updated : Jul 25, 2022, 3:02 PM IST

ಬೆಳಗಾವಿ:ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ್ ‌ಟಾಕಳೆ ಮತ್ತು ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ರಾವ್ ದೂರು-ಪ್ರತಿದೂರು ಕುರಿತಂತೆ ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ನವ್ಯಶ್ರೀ ರಾವ್ ಅವರು ಇಂದು ಪೊಲೀಸ್​ ವಿಚಾರಣೆಗೆ ಹಾಜರಾಗಿದ್ದಾರೆ.

ಕಳೆದ ಹಲವು‌ ದಿನಗಳ ಹಿಂದೆ ಚನ್ನಪಟ್ಟಣ ಮೂಲದ ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ರಾವ್ ವಿರುದ್ಧ ಬೆಳಗಾವಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಜುಲೈ 18ರಂದು ದೂರು ನೀಡಿದ್ದರು. ದೂರಿನಲ್ಲಿ ಸುಳ್ಳು ಅತ್ಯಾಚಾರ ಕೇಸ್ ದಾಖಲಿಸುವುದಾಗಿ ಬೆದರಿಕೆ, ಸುಲಿಗೆ ಬ್ಲ್ಯಾಕ್​ಮೇಲ್ ಬಗ್ಗೆ ಉಲ್ಲೇಖಿಸಿದ್ದರು.

ಇದಾದ ಬಳಿಕ ಜುಲೈ 23ರಂದು ರಾಜಕುಮಾರ ಟಾಕಳೆ ವಿರುದ್ಧ ನವ್ಯಶ್ರೀ ದೂರು ನೀಡಿದ್ದರು. ನವ್ಯಶ್ರೀ ದೂರಿನಂತೆ ಅತ್ಯಾಚಾರ, ಕಿಡ್ನಾಪ್, ಗರ್ಭಪಾತ ಮಾಡಿಸಿದ್ದು, ‌ಮೋಸ, ಮಹಿಳೆ ಮೇಲೆ ಹಲ್ಲೆ, ಅವಾಚ್ಯವಾಗಿ ನಿಂದಿಸುವುದು, ಜೀವ ಬೆದರಿಕೆ, ಗೌರವಕ್ಕೆ ಧಕ್ಕೆ ಹಾಗೂ ಖಾಸಗೀತನಕ್ಕೆ ದಕ್ಕೆ ವಿಚಾರದಡಿಯಲ್ಲಿ, ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್ ಮಾಡಿರುವ ಬಗ್ಗೆ ವಿವಧ ಸೆಕ್ಷನ್ ಹಾಗೂ ಆ್ಯಕ್ಟ್​​ಗಳಡಿ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ:ಅತ್ಯಾಚಾರ, ಗರ್ಭಪಾತ ಸೇರಿ ವಿವಿಧ ಸೆಕ್ಷನ್​ಗಳ ಅಡಿ ಟಾಕಳೆ ವಿರುದ್ಧ ನವ್ಯಶ್ರೀ ದೂರು

ಇದಕ್ಕೂ ಮುನ್ನ ನವ್ಯಶ್ರೀ ವಿರುದ್ಧ ಎಪಿಎಂಸಿ ಠಾಣೆಗೆ ರಾಜಕುಮಾರ್ ‌ಟಾಕಳೆ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನವ್ಯಶ್ರೀ ಅವರ ವಿಚಾರಣೆ ನಡೆಯಲಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ ಯಾವಾಗಿನಿಂದ ಪರಿಚಯ, ಎಲ್ಲೆಲ್ಲಿ ಭೇಟಿ ಆಗಿದ್ದರು. ಅವರಿಂದ ಏನೆಲ್ಲಾ ಮೋಸ ಆಗಿದೆ ಎಂಬುದರ ಜೊತೆಗೆ ಟಾಕಳೆಗೆ 50 ಲಕ್ಷ ರೂ. ಹಣದ ಬೇಡಿಕೆ ಇಟ್ಟಿರುವ ಬಗ್ಗೆ ಪೊಲೀಸರು ಪ್ರಶ್ನಿಸಲಿದ್ದಾರೆ. ಬಳಿಕ ನವಶ್ರೀ ಅವರನ್ನು ಮೆಡಿಕಲ್‌ ಚೆಕ್ ಅಪ್ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ವೈದ್ಯಕೀಯ ತಪಾಸಣೆಗೆ ಕರೆದೊಯ್ದ ಎಪಿಎಂಸಿ ಪೊಲೀಸರು:
ಬೆಳಗಾವಿಯ ಎಪಿಎಂಸಿ ಠಾಣೆಯಿಂದ ಕರೆದುಕೊಂಡು ಹೋದ ಪೊಲೀಸರು ಬಿಮ್ಸ್ ಆಸ್ಪತ್ರೆಯಲ್ಲಿ ನವ್ಯಶ್ರೀ ಅವರಿಗೆ ವೈದ್ಯಕೀಯ ತಪಾಸಣೆ ನಡೆಸಲಿದ್ದಾರೆ. ರಾಜಕುಮಾರ ಟಾಕಳೆ ವಿರುದ್ಧ ಅತ್ಯಾಚಾರ, ಗರ್ಭಪಾತ ಆರೋಪವನ್ನು ನವ್ಯಶ್ರೀ ಮಾಡಿದ್ದರು‌.ನವ್ಯಶ್ರೀ ನೀಡಿದ ದೂರಿನ ಮೇರೆಗೆ ವೈದ್ಯಕೀಯ ತಪಾಸಣೆ ನಡೆಯುತ್ತಿದೆ. ಇದಕ್ಕೂ ಮುಂಚೆ ಮಾಧ್ಯಮದವರೊಂದಿಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ, ಅಶ್ಲೀಲ ಸಿಡಿ ವೈರಲ್ ಮಾಡಿಸಿದ ಆ ನಾಯಕ ಯಾರು ಎಂಬುದು ತನಿಖೆ ಮೂಲಕ ಬಯಲಾಗುತ್ತದೆ.ಅದಾದ್ಮೇಲೆ ನಾನೇ ಮಾಧ್ಯಮಗಳ ಮುಂದೆ ಬರುತ್ತೇನೆ ಎಂದಿದ್ದರು.

ಇದನ್ನೂ ಓದಿ:'50 ಲಕ್ಷಕ್ಕೆ ನವ್ಯಶ್ರೀ ಬೇಡಿಕೆಯಿಟ್ಟಿದ್ದರು, ಈಗಾಗಲೇ 5 ಲಕ್ಷ ಪಡೆದುಕೊಂಡಿದ್ದಾರೆ': ಟಾಕಳೆ

Last Updated : Jul 25, 2022, 3:02 PM IST

ABOUT THE AUTHOR

...view details