ಶಿವಮೊಗ್ಗ: ಮನೆಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರದ ಎಸ್.ಎನ್ ನಗರದ ಹೊಸಬಡಾವಣೆಯಲ್ಲಿ ನಡೆದಿದೆ. ನಾಗರಾಜ್ (23) ಆತ್ಮಹತ್ಯೆಗೆ ಶರಣಾಗಿರುವ ಯುವಕ.
ಗ್ಯಾಸ್ ಬಂಕ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ನಾಗರಾಜ್ ಎರಡು ದಿನಗಳ ಹಿಂದೆಯಷ್ಟೇ ಸ್ನೇಹಿತರೊಂದಿಗೆ ಜನ್ಮದಿನ ಆಚರಿಸಿಕೊಂಡಿದ್ದ. ಹಾಗೆಯೇ ನಾಗರಾಜನ ತಾಯಿ ಮೃತಪಟ್ಟು ನಾಳೆಗೆ ಒಂದು ವರ್ಷ ಆಗಲಿದೆ. ಮನೆಯಲ್ಲಿ ಒಬ್ಬಂಟಿ ಆಗಿದ್ದ ನಾಗರಾಜ್, ತಾಯಿಯ ಅಗಲಿಕೆಯಿಂದ ಮಾನಸಿಕವಾಗಿ ನೊಂದಿದ್ದ ಎನ್ನಲಾಗ್ತಿದೆ.