ಕರ್ನಾಟಕ

karnataka

ಶಿವಮೊಗ್ಗ - ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಎಸ್.ಎಸ್.ಜ್ಯೋತಿ ಪ್ರಕಾಶ್ ನೇಮಕ

ಶಿವಮೊಗ್ಗ ತಾಲೂಕು ಎಪಿಎಂಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಎಸ್.ಎಸ್.ಜ್ಯೋತಿ ಪ್ರಕಾಶ್ ಅವರನ್ನು ಶಿವಮೊಗ್ಗ - ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

By

Published : Aug 27, 2020, 10:38 AM IST

Published : Aug 27, 2020, 10:38 AM IST

SS Jyoti Prakash
SS Jyoti Prakash

ಶಿವಮೊಗ್ಗ: ಶಿವಮೊಗ್ಗ - ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಎಸ್.ಎಸ್.ಜ್ಯೋತಿ ಪ್ರಕಾಶ್ ಆಯ್ಕೆಯಾಗಿದ್ದಾರೆ.

ಜ್ಯೋತಿ ಪ್ರಕಾಶ್ ಅವರು ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದರು. ಇವರು ಶಿವಮೊಗ್ಗ ತಾಲೂಕು ಎಪಿಎಂಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಜೊತೆ ಉಮಾಮೂರ್ತಿ, ರಾಮಲಿಂಗಯ್ಯ, ಕದಿರೇಶ್ ಹಾಗೂ ದೇವರಾಜ್ ನಾಯ್ಕ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಇನ್ನು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿಯ ನಾಗರಾಜ್ ಆಯ್ಕೆಯಾಗುತ್ತಾರೆ ಎಂಬ ಸುದ್ದಿ ಹರಡಿತ್ತು. ಆದರೆ, ಯಡಿಯೂರಪ್ಪ ಆಪ್ತರಾದ ಜ್ಯೋತಿಪ್ರಕಾಶ್ ಗೆ ಅಧ್ಯಕ್ಷ ಸ್ಥಾನ ನೀಡಿರುವುದರಿಂದ ಸದ್ಯದ ಮಟ್ಟಿಗೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಕಾಣಿಸಿಕೊಂಡಿದೆ ಎನ್ನಲಾಗಿದೆ.

For All Latest Updates

TAGGED:

ABOUT THE AUTHOR

...view details