ಶಿವಮೊಗ್ಗ:ಕೋವಿಡ್-19ನಿಂದಾಗಿ ಮುಂದೂಡಲ್ಪಟ್ಟ ಪರೀಕ್ಷೆಗಳು ಇಂದಿನಿಂದ ಪ್ರಾರಂಭವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 84 ಪರೀಕ್ಷಾ ಕೇಂದ್ರಗಳಿವೆ. ಜಿಲ್ಲೆಯಲ್ಲಿ ಒಟ್ಟು 24,904 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರಲು ಸರ್ಕಾರ ಬಸ್ ವ್ಯವಸ್ಥೆ ಮಾಡಿದೆ.
ಶಿವಮೊಗ್ಗದಲ್ಲಿ ಪರೀಕ್ಷಾರ್ಥಿಗಳ ಸುರಕ್ಷತೆಗೆ ಮುನ್ನೆಚ್ಚರಿಕಾ ಕ್ರಮ - exam in shimogga
ಕೋವಿಡ್ 19ನಿಂದಾಗಿ ಮುಂದೂಡಲ್ಪಟ್ಟ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಇಂದಿನಿಂದ ಪ್ರಾರಂಭವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 84 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 24,904 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಪರೀಕ್ಷಾ ಕೇಂದ್ರಗಳು
ಜಿಲ್ಲೆಯಲ್ಲಿ 114 ಬಸ್ ರೂಟ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಂದಾಗ ಸ್ಯಾನಿಟೈಸರ್ ಮಾಡಲಾಗಿದೆ. ಬಳಿಕ ಥರ್ಮಲ್ ಸ್ಕ್ರೀನಿಂಗ್ ಮಾಡಿ, ನಂತರ ಮಾಸ್ಕ್ ಒದಗಿಸಲಾಗಿದೆ. ಪ್ರತಿ ಕೊಠಡಿಯಲ್ಲಿ 16 ವಿದ್ಯಾರ್ಥಿಗಳು ಕುಳಿತು ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.