ಕರ್ನಾಟಕ

karnataka

ETV Bharat / state

ಕಂಟೇನ್ಮೆಂಟ್​​​​ ವಲಯದಲ್ಲಿ ತೀವ್ರ ಕಟ್ಟೆಚ್ಚರ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್​​ - Shivamogga DC action

ಶಿವಮೊಗ್ಗ ಜಿಲ್ಲೆಯಲ್ಲಿ ಐದು ಕಂಟೇನ್ಮೆಂಟ್ ವಲಯಗಳನ್ನು ಗುರುತಿಸಲಾಗಿದ್ದು, ಈ ಪ್ರದೇಶದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಏನು ಮಾಡಬೇಕು ಎಂಬುದರ ಬಗ್ಗೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚನೆ ನೀಡಿದರು.

Strict action in the in Containment Zone: Shivamogga DC
ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

By

Published : May 22, 2020, 6:57 PM IST

ಶಿವಮೊಗ್ಗ: ಈಗಾಗಲೇ ಜಿಲ್ಲೆಯಲ್ಲಿ ಐದು ಕಂಟೇನ್ಮೆಂಟ್ ವಲಯಗಳನ್ನು ಘೋಷಿಸಲಾಗಿದ್ದು, ಈ ಪ್ರದೇಶದಲ್ಲಿ ಯಾರೂ ಮನೆಯಿಂದ ಹೊರಗೆ ಬರದಂತೆ ಸೂಕ್ತ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

ಇಂದು ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ವಿವರ ಪಡೆದುಕೊಂಡರು. ಪಾಸಿಟಿವ್ ಪ್ರಕರಣಗಳು ಕಂಡುಬಂದ ಕಂಟೇನ್ಮೆಂಟ್ ಪ್ರದೇಶದಿಂದ ಮೆಡಿಕಲ್ ಎಮರ್ಜೆನ್ಸಿ ಪ್ರಕರಣಗಳನ್ನು ಮಾತ್ರ ಹೊರಗೆ ಬಿಡಬೇಕು. ಪಾಸಿಟಿವ್ ಪ್ರಕರಣಗಳು ಕಂಡುಬಂದ ತಕ್ಷಣ ಕಂಟೇನ್ಮೆಂಟ್ ಪ್ರದೇಶ ಗುರುತಿಸಿ ಬಂದೋಬಸ್ತ್​ ಏರ್ಪಡಿಸಬೇಕು. ಕಂಟೇನ್ಮೆಂಟ್ ಪ್ರದೇಶದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ನೋಡಿಕೊಳ್ಳಬೇಕು. ಈ ವಲಯದಲ್ಲಿ 2 ಆಶಾ ಕಾರ್ಯಕರ್ತೆಯರು, 2 ಪೊಲೀಸ್ ಸಿಬ್ಬಂದಿ ಬಿಟ್ಟರೆ ಬೇರೆ ಯಾವುದೇ ಸರ್ಕಾರಿ ಅಧಿಕಾರಿಗಳು ಇರಬಾರದು. ಅದೇ ರೀತಿ ಕ್ವಾರಂಟೈನ್ ಕೇಂದ್ರಗಳ ಒಳಗೆ ನಿಗದಿಪಡಿಸಿರುವ ಸಿಬ್ಬಂದಿ ಬಿಟ್ಟರೆ ಬೇರೆ ಯಾರಿಗೂ ಪ್ರವೇಶವಿಲ್ಲ ಎಂದು ಸ್ಪಷ್ಪಪಡಿಸಿದರು.

ಕಂಟೇನ್ಮೆಂಟ್ ಪ್ರದೇಶದಲ್ಲಿ ಪ್ರತಿದಿನ ಆರೋಗ್ಯ ಸಮೀಕ್ಷೆ ನಡೆಸಬೇಕು. ರೋಗ ಲಕ್ಷಣಗಳು ಕಂಡು ಬಂದವರ ಗಂಟಲ ದ್ರವವನ್ನು ಸಂಗ್ರಹಿಸಿ ಕಳುಹಿಸಬೇಕು ಎಂದರು. ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ತಂಡವನ್ನು ರಚಿಸಲಾಗಿದ್ದು, ಈ ತಂಡಕ್ಕೆ ತಹಶೀಲ್ದಾರ್ ಹಾಗೂ ಆರೋಗ್ಯ ಇಲಾಖೆ ಸಮರ್ಪಕ ಮಾಹಿತಿಯನ್ನು ಆಗಿಂದಾಗ್ಗೆ ಒದಗಿಸಬೇಕು. ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಿದ ತಕ್ಷಣ ತಾಲೂಕು ಮಟ್ಟದಲ್ಲಿ ಅವರ ಗಂಟಲ ದ್ರವ ಸಂಗ್ರಹಿಸಿ ತಪಾಸಣೆಗೆ ಕಳುಹಿಸಬೇಕು. 14ದಿನ ಕ್ವಾರಂಟೈನ್ ಪೂರ್ಣಗೊಳಿಸಿರುವವರನ್ನು ಹೋಂ ಕ್ವಾರಂಟೈನ್​​​ಗೆ ಕಳುಹಿಸಬೇಕು ಎಂದು ಹೇಳಿದರು.

ABOUT THE AUTHOR

...view details