ಶಿವಮೊಗ್ಗ:ಪ್ರಾಣಿ ಬಲಿ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಂಚಾಲಕ ರಾಜೇಶ್ಗೌಡ ಆಗ್ರಹಿಸಿದರು.
ಪ್ರಾಣಿ ಬಲಿ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ: ರಾಜೇಶ್ ಗೌಡ - Shivamogga district news
ಮುಸ್ಲೀಮರ ಬಕ್ರೀದ್ ಹಬ್ಬ ಸಮೀಪಿಸುತ್ತಿದ್ದು, ಪ್ರಾಣಿ ಬಲಿ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಂಚಾಲಕ ರಾಜೇಶ್ಗೌಡ ಒತ್ತಾಯಿಸಿದರು.
ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಂಚಾಲಕ ರಾಜೇಶ್ಗೌಡ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಕ್ರೀದ್ ಹಬ್ಬದ ವೇಳೆ ಅಕ್ರಮವಾಗಿ ಗೋ ಸಾಗಣೆ ಮಾಡಲಾಗುತ್ತಿದೆ. ಹಾಗಾಗಿ, ರಾಜ್ಯದ ಎಲ್ಲಾ ಗಡಿಗಳಲ್ಲಿ ಚೆಕ್ಬಂದಿ ಹಾಕಿ ವಾಹನಗಳನ್ನು ತಪಾಸಣೆ ಮಾಡಬೇಕು ಎಂದು ಮನವಿ ಮಾಡಿದರು.
ಗೋವುಗಳ ಕಳ್ಳಸಾಗಣೆ ಕೃತ್ಯದಲ್ಲಿ ಭಾಗಿಯಾಗುವವರ ವಿರುದ್ಧ ಪ್ರಕರಣ ದಾಖಲಿಸಬೇಕು. ಹಾಗೂ ವಶಕ್ಕೆ ಪಡೆಯಲಾದ ಗೋವುಗಳನ್ನು ಸಂಬಂಧಪಟ್ಟ ಮಾಲೀಕರಿಗೆ ಅಥವಾ ಗೋ ಶಾಲೆಗಳಿಗೆ ನೀಡಬೇಕು ಎಂದು ಒತ್ತಾಯಿಸಿದರು.