ಶಿವಮೊಗ್ಗ: ಕಳೆದ ಒಂದು ವಾರದಿಂದ ಕಾಣೆಯಾಗಿದ್ದ ಪಿಯುಸಿ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿರುವ ಘಟನೆ ಭದ್ರಾವತಿ ತಾಲೂಕು ಬಿ.ಆರ್.ಪ್ರಾಜೆಕ್ಟ್ನಲ್ಲಿ ನಡೆದಿದೆ. ಯಶವಂತ (16) ಮೃತ ವಿದ್ಯಾರ್ಥಿ. ಭದ್ರಾವತಿ ತಾಲೂಕು ಹುಣಸೆಕಟ್ಟೆ ಜಂಕ್ಷನ್ ನಿವಾಸಿ ಸುರೇಶ್ ಎಂಬುವರ ಮಗ ಯಶವಂತ ನ್ಯಾಶನಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದನು.
ಕಳೆದ ಶನಿವಾರ 3 ರಂದು ಮನೆಯಿಂದ ಕಾಲೇಜಿಗೆ ಹೋಗುವುದಾಗಿ ಹೇಳಿ ಹೋಗಿದ್ದ ಯಶವಂತ ಮನೆಗೆ ವಾಪಸ್ ಆಗಿರಲಿಲ್ಲ. ಯಶವಂತ ತಂದೆ ಈ ಕುರಿತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ರು. ಆದರೆ, ಇಂದು ಯಶವಂತನ ಶವ ಬಿ.ಆರ್.ಪ್ರಾಜೆಕ್ಟ್ ಬಳಿಯ ಭದ್ರಾ ಕಾಲುವೆಯಲ್ಲಿ ಪತ್ತೆಯಾಗಿದೆ.