ಶಿವಮೊಗ್ಗ: ಕೋವಿಡ್ -19 ಲಾಕ್ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದ ಪಿಯುಸಿ ಇಂಗ್ಲಿಷ್ ಪರೀಕ್ಷೆಯು ಇಂದು ರಾಜ್ಯದಾದ್ಯಂತ ನಡೆಯುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ 33 ಪರೀಕ್ಷಾ ಕೇಂದ್ರಗಳಲ್ಲಿ 18,799 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು - 2 ಪಿಯುಸಿ ಪರೀಕ್ಷೆ ನ್ಯೂಸ್
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 33 ಪರೀಕ್ಷಾ ಕೇಂದ್ರಗಳಲ್ಲಿ 18,799 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಬರೆಯುತ್ತಿದ್ದಾರೆ.
Puc
ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ಮಾಡಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಯಿತು. ಜೊತೆಗೆ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.