ಶಿವಮೊಗ್ಗ: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಒಂದರ ಆಡಿಟರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಪ್ರೀತಿಸಿದ ಹುಡುಗಿಗೆ ಮತ್ತೊಬ್ಬನೊಂದಿಗೆ ಮದುವೆ: ಯುವಕ ನೇಣಿಗೆ ಶರಣು - Jayanagar Police Station, Shimoga
ಪ್ರೇಮ ವೈಫಲ್ಯದ ಹಿನ್ನೆಲೆ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಒಂದರ ಆಡಿಟರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಯುವಕ ನೇಣಿಗೆ ಶರಣು
ಸಚಿನ್ (24) ಮೃತ ವ್ಯಕ್ತಿ. ನಗರದ ಜಯನಗರದಲ್ಲಿ ಬಾಡಿಗೆ ರೂಮ್ ಮಾಡಿಕೊಂಡು ಸಚಿನ್ ವಾಸವಾಗಿದ್ದ. ಈತ ಪ್ರೇಮಿಸುತ್ತಿದ್ದ ಯುವತಿಗೆ ಇತ್ತೀಚಿಗಷ್ಟೇ ಮದುವೆಯಾಗಿತ್ತು.
ಇದರಿಂದ ಖಿನ್ನತೆಗೆ ಒಳಗಾಗಿದ್ದ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆತನ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.