ಶಿವಮೊಗ್ಗ: ಚಲಿಸುತ್ತಿದ್ದ ಎರಡು ಕಾರುಗಳ ಮಧ್ಯೆ ಬಂದು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ತೀವ್ರ ಗಾಯಗೊಂಡಿರುವ ಘಟನೆ ಸಾಗರದ ಉಳ್ಳೂರು ಗ್ರಾಮದ ಬಳಿ ನಡೆದಿದೆ.
ಕಾರುಗಳ ಮಧ್ಯೆ ಬೈಕ್ ನುಗ್ಗಿಸಲು ಯತ್ನ: 10 ಅಡಿ ದೂರಕ್ಕೆ ಹೋಗಿ ಬಿದ್ದ ಬೈಕ್ ಸವಾರ - kannadanews
ಸಾಗರ ತಾಲೂಕಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಕಾರ್ಗಳಿಗೆ ಬೈಕ್ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.
ಸಾಗರ ಕಡೆಯಿಂದ ಬರುತ್ತಿದ್ದ ಕಾರುಗಳ ನಡುವೆ ಏಕಾಏಕಿ ಬೈಕ್ ನುಗ್ಗಿದ ಪರಿಣಾಮ ಬೈಕ್ ಸವಾರ ರಸ್ತೆಯಿಂದ ಹತ್ತು ಅಡಿ ದೂರ ಹೋಗಿ ಬಿದ್ದಿದ್ದಾನೆ. ಇದರಿಂದ ಕಾರುಗಳ ಮುಂಭಾಗ ಸಂಪೂರ್ಣ ಜಖಂ ಆಗಿವೆ. ಗಾಯಗೊಂಡಿದ್ದ ಬೈಕ್ ಸವಾರನನ್ನು ಸ್ಥಳೀಯರು ತಕ್ಷಣ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ಸ್ಥಿತಿ ಗಂಭೀರವಾಗಿದೆ. ಅಪಘಾತದ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳೂರು ಅಪಘಾತ ವಲಯವಾಗಿದ್ದು, ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಆದ್ರೆ ಸಾರಿಗೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಪಘಾತ ತಡೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.