ಶಿವಮೊಗ್ಗ:ಜಿಲ್ಲೆಯ ಮಲ್ಲಿಗೆನಹಳ್ಳಿಯ ಅಂಬೇಡ್ಕರ್ ನಗರದಲ್ಲಿ ವಾಸಿಸುತ್ತಿರುವ ಹಕ್ಕಿ-ಪಿಕ್ಕಿ ಸಮುದಾಯದವರು ಈ ಬಾರಿ ಲೋಕಸಭಾ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.
ಹಕ್ಕಿ- ಪಿಕ್ಕಿ ಸಮುದಾಯದಿಂದ ಮತದಾನ ಬಹಿಷ್ಕಾರಕ್ಕೆ ನಿರ್ಧಾರ - ಮತದಾನ ಬಹಿಷ್ಕಾರ
ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಯಾವುದೇ ಮೂಲ ಸೌಕರ್ಯ ದೊರೆತಿಲ್ಲ- ಹಕ್ಕಿ- ಪಿಕ್ಕಿ ಸಮುದಾಯವನ್ನು ಮಹಾನಗರ ಪಾಲಿಕೆ ಈ ಸಮುದಾಯವನ್ನ ನಿರ್ಲಕ್ಷಿಸಿದೆ-ಲೋಕಸಭಾ ಚುನಾವಣೆಯಲ್ಲಿ ಯಾರೂಕೂಡ ಮತದಾನ ಮಾಡದೇ ಸಾಮೂಹಿಕ ಮತದಾನ ಬಹಿಷ್ಕಾರ ಮಾಡುತ್ತಿದ್ದೇವೆ ಎಂದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ.
ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಎಂ. ಗುರುಮೂರ್ತಿ
ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಎಂ. ಗುರುಮೂರ್ತಿ
ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಎಂ. ಗುರುಮೂರ್ತಿ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಯಾವುದೇ ರೀತಿಯ ಮೂಲ ಸೌಕರ್ಯ ದೊರೆಯದ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರ ಮಾಡುತ್ತಿದ್ದೇವೆ ಎಂದರು.
ಹಕ್ಕಿ-ಪಿಕ್ಕಿ ಸಮುದಾಯದ ಜನರಿಗೆ ಕುಡಿಯುವ ನೀರು, ಶೌಚಾಲಯ ಹಾಗೂ ಬೀದಿ ದೀಪಗಳು, ರಸ್ತೆ ಹೀಗೆ ಮೂಲಭೂತ ಸೌಲಭ್ಯಗಳನ್ನು ನೀಡದೆ ಮಹಾನಗರ ಪಾಲಿಕೆ ಈ ಸಮುದಾಯವನ್ನ ನಿರ್ಲಕ್ಷಿಸಿದೆ. ಹಾಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಾರು ಮತದಾನ ಮಾಡದೇ ಚುನಾವಣೆ ಬಹಿಷ್ಕಾರ ಮಾಡಬೇಕೆಂದು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.