ಶಿವಮೊಗ್ಗ: ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿರುವ ರೈತರಿಗೆ ಪರಿಹಾರ ಮತ್ತು ಪ್ರವಾಹ ಪರಿಸ್ಥಿತಿ ಎದುರಿಸಲು ಸರ್ಕಾರ ತಕ್ಷಣ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಪ್ರವಾಹ ಪರಿಸ್ಥಿತಿ ಎದುರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿ: ಮಾಜಿ ಶಾಸಕಿ - ಶಿವಮೊಗ್ಗದಲ್ಲಿ ಪ್ರವಾಹ
ಪ್ರವಾಹ ಪರಿಸ್ಥಿತಿ ಎದುರಿಸಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬೆಳೆ ಹಾನಿಯಾಗಿರುವ ರೈತರಿಗೆ ಪರಿಹಾರ ನೀಡಬೇಕು ಎಂದು ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ ಒತ್ತಾಯಿಸಿದರು.

ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಮಾಜಿ ಶಾಸಕಿ
ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ
ಧಾರಾಕಾರ ಮಳೆ ಸುರಿದ ಪರಿಣಾಮವಾಗಿ ರೈತರ ಬೆಳೆಗಳು ನಾಶವಾಗಿವೆ. ಮೆಕ್ಕೆಜೋಳ, ಬಾಳೆ, ತರಕಾರಿ, ಅಡಿಕೆ ಸೇರಿದಂತೆ ಮುಂತಾದ ಬೆಳೆಗಳು ನೆಲಕಚ್ಚಿವೆ. ಹಾಗಾಗಿ, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಹ ಪರಿಸ್ಥಿತಿ ಎದುರಿಸಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬೆಳೆ ಹಾನಿಯಾಗಿರುವ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.