ಕರ್ನಾಟಕ

karnataka

ETV Bharat / state

ಲಸಿಕೆ ನೀಡಲು ಆರೋಗ್ಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ: ಕೆ ಎಸ್ ಈಶ್ವರಪ್ಪ

ಲಸಿಕೆ ಪಡೆಯಲಿಚ್ಛಿಸುವವರು ತಮ್ಮ ವೈಯಕ್ತಿಕ ವಿವರಗಳನ್ನು ಆನ್​ಲೈನ್ ಮೂಲಕ ಅಥವಾ ಆರೋಗ್ಯ ಕೇಂದ್ರಕ್ಕೆ ಖುದ್ದು ಭೇಟಿ ನೀಡಿ ಹೆಸರು ನೋಂದಾಯಿಸಿಕೊಂಡು ಉಚಿತವಾಗಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್​ ಈಶ್ವರಪ್ಪ ತಿಳಿಸಿದ್ದಾರೆ.

ks-eshwarappa
ಕೆ ಎಸ್ ಈಶ್ವರಪ್ಪ

By

Published : Apr 16, 2021, 4:48 PM IST

ಶಿವಮೊಗ್ಗ: ವೈದ್ಯರ ಸಲಹೆಯ ಮೇರೆಗೆ ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯುವವರಿಗೆ ಲಸಿಕೆಗಳನ್ನು ನೀಡಲು ಆರೋಗ್ಯ ಇಲಾಖೆಯು ಸಕಲ ಸಿದ್ಧತೆ ಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ದಿ, ಪಂಚಾಯತ್​ ರಾಜ್​ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್.​ ಈಶ್ವರಪ್ಪ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳೊಂದಿಗೆ ಕೊರೊನಾ ಸೋಂಕಿನ ನಿಯಂತ್ರಣದಲ್ಲಿ ಜಿಲ್ಲಾಡಳಿತದ ಕ್ರಮಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಲಸಿಕೆ ಪಡೆಯಲಿಚ್ಛಿಸುವವರು ತಮ್ಮ ವೈಯಕ್ತಿಕ ವಿವರಗಳನ್ನು ಆನ್​ಲೈನ್ ಮೂಲಕ ಅಥವಾ ಆರೋಗ್ಯ ಕೇಂದ್ರಕ್ಕೆ ಖುದ್ದು ಭೇಟಿ ನೀಡಿ ಹೆಸರು ನೋಂದಾಯಿಸಿಕೊಂಡು ಉಚಿತವಾಗಿ ಪಡೆಯಬಹುದಾಗಿದೆ. ಅಲ್ಲದೇ, ನಗರದ ಆಯ್ದ 12 ಖಾಸಗಿ ಆಸ್ಪತ್ರೆಗಳಲ್ಲಿಯೂ ಲಸಿಕೆ ಲಭ್ಯವಿದ್ದು, ರೂ.250/-ಗಳನ್ನು ಪಾವತಿಸಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಕೆ. ಎಸ್. ಈಶ್ವರಪ್ಪ ಮಾತನಾಡಿದರು

ಜಿಲ್ಲೆಯ ಜನರ ಬೇಡಿಕೆಗೆ ಪೂರಕವಾಗಿ ಲಸಿಕೆ ದಾಸ್ತಾನಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ. ಒಂದೊಮ್ಮೆ ಹೆಸರು ನೋಂದಾಯಿಸಿಕೊಂಡವರು ನಿಗದಿಪಡಿಸಿದ ದಿನಾಂಕದಂದು ಲಸಿಕೆ ಪಡೆಯಲು ಸಾಧ್ಯವಾಗದಿದ್ದಲ್ಲಿ ಮರುದಿನ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದ ಅವರು, ಲಸಿಕೆ ಹೊಂದುವವರು ಅನಗತ್ಯವಾಗಿ ಚಿಕಿತ್ಸಾಲಯಕ್ಕೆ ಓಡಾಡದಂತೆ ಕ್ರಮ ವಹಿಸಲು ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ 124 ಉಪ ಆರೋಗ್ಯ ಕೇಂದ್ರಗಳಲ್ಲಿ, 103 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, 07 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, 6 ತಾಲೂಕು ಆಸ್ಪತ್ರೆಗಳಲ್ಲಿ, ಸಿಮ್ಸ್, ಸರ್ಕಾರಿ ಆಯುರ್ವೇದದ ವೈದ್ಯಕೀಯ ಕಾಲೇಜುಗಳ ತಲಾ ಒಂದು ಕೇಂದ್ರಗಳಲ್ಲಿ ಹಾಗೂ ಸ್ಥಳೀಯ ನೋಂದಾಯಿತ 12 ಖಾಸಗಿ ಆಸ್ಪತ್ರೆಗಳು ಸೇರಿದಂತೆ ಒಟ್ಟು 173 ಕೇಂದ್ರಗಳಲ್ಲಿ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಸಿಮ್ಸ್​ನಲ್ಲಿ ಕೊರತೆಯಿರುವ ಸಿಬ್ಬಂದಿಯನ್ನು ಭರ್ತಿ ಮಾಡಿಕೊಳ್ಳಲು ತಾತ್ಕಾಲಿಕ ಅನುಮತಿ ದೊರೆತಿದ್ದು, ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಸಿಮ್ಸ್​ನ ಆಡಳಿತ ವ್ಯವಸ್ಥೆ ಹಾಗೂ ಕೋವಿಡ್ ನಿಯಂತ್ರಣದ ಹಿನ್ನೆಲೆ ಕೈಗೊಂಡಿರುವ ಕ್ರಮಗಳ ಕುರಿತು ಏಪ್ರಿಲ್ 17ರಂದು ಬೆಳಗ್ಗೆ ಖುದ್ದು ಭೇಟಿ ನೀಡಿ, ಪರಿಶೀಲಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಓದಿ:ಸಿಎಂಗೆ ತಗುಲಿದ ಕೊರೊನಾ ಸೋಂಕು; ಮಣಿಪಾಲ್​ ಆಸ್ಪತ್ರೆಗೆ ದಾಖಲು

For All Latest Updates

TAGGED:

ABOUT THE AUTHOR

...view details