ಶಿವಮೊಗ್ಗ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕುಟುಂಬ ಸಮೇತರಾಗಿ 'ದಿ ಕಾಶ್ಮೀರ್ ಫೈಲ್ಸ್' ಚಿತ್ರ ವೀಕ್ಷಿಸಿದರು.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಕುಟುಂಬ ಸಮೇತರಾಗಿ ದಿ ಕಾಶ್ಮೀರ್ ಫೈಲ್ ಚಿತ್ರವನ್ನು ವೀಕ್ಷಿಸಿದ್ದಾರೆ. ನಗರದ ಶ್ರೀ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಚಿತ್ರ ವೀಕ್ಷಿಸಿದ ಅವರು ತಮ್ಮ ನೇತೃತ್ವದಲ್ಲಿ ಶಿವಮೊಗ್ಗ ನಗರದ ಸಾರ್ವಜನಿಕರಿಗೆ ಉಚಿತ ಚಲನಚಿತ್ರ ಪ್ರದರ್ಶನಕ್ಕೆ ವ್ಯವಸ್ಥೆ ಸಹ ಮಾಡಿದ್ದರು.
'ದಿ ಕಾಶ್ಮೀರ್ ಫೈಲ್' ಚಿತ್ರ ವಿಕ್ಷೀಸಿದ ಕೆ.ಎಸ್. ಈಶ್ವರಪ್ಪ ಈ ಸಂದರ್ಭದಲ್ಲಿ ಈಶ್ವರಪ್ಪನವರ ಪತ್ನಿ ಜಯಲಕ್ಷ್ಮಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್, ಪುತ್ರ ಕೆ.ಈ ಕಾಂತೇಶ್, ನಗರ ಬಿಜೆಪಿ ಅಧ್ಯಕ್ಷ ಎನ್. ಕೆ. ಜಗದೀಶ್ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಪಾಲಿಕೆ ಸದಸ್ಯರಾದ ಎಸ್.ಎನ್. ಚನ್ನಬಸಪ್ಪ, ಸುರೇಖಾ ಮುರಳೀಧರ್, ಅನಿತಾ ರವಿಶಂಕರ್, ವಿಶ್ವಾಸ್ ಸೇರಿದಂತೆ ಪಕ್ಷದ ಮುಖಂಡರು, ಸ್ವಾಮೀಜಿಗಳು ಚಿತ್ರ ವೀಕ್ಷಿಸಿದರು.
ಇದನ್ನೂ ಓದಿ:ಮಕ್ಕಳ ಭವಿಷ್ಯದ ವಿಚಾರದಲ್ಲಿ ರಾಜಕೀಯ ಬೆರೆಸಿದ ಕಾಂಗ್ರೆಸ್ ಧೋರಣೆಗೆ ಉತ್ತರ ಸಿಕ್ಕಿದೆ: ಬಿಜೆಪಿ ಟ್ವೀಟ್