ಶಿವಮೊಗ್ಗ:ಜಿಲ್ಲೆಯಲ್ಲಿ ರಂಗಾಯಣದ ವತಿಯಿಂದ ಆಯೋಜಿಸಲಾಗಿರುವ ಸ್ವಾತಂತ್ರ್ಯೋತ್ಸವ ರಂಗ ಸಂಭ್ರಮ ಕಾರ್ಯಕ್ರಮಕ್ಕೆ ಶಿವಮೊಗ್ಗ ಕಲಾವಿದರ ಒಕ್ಕೂಟದ ಉಪಾಧ್ಯಕ್ಷ ಕೆ.ಜಿ.ವೆಂಕಟೇಶ್ ಚಾಲನೆ ನೀಡಿದ್ದು, ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ನಾಟಕಗಳು ಜನರನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ ಎಂದಿದ್ದಾರೆ.
ಸ್ವಾತಂತ್ರ್ಯ ಚಳುವಳಿಯಲ್ಲಿ ನಾಟಕಗಳ ಪಾತ್ರ ತುಂಬಾ ಮುಖ್ಯವಾಗಿತ್ತು: ಕೆ.ಜಿ.ವೆಂಕಟೇಶ್
ಶಿವಮೊಗ್ಗದಲ್ಲಿ ರಂಗಾಯಣದ ವತಿಯಿಂದ ಆಯೋಜಿಸಲಾಗಿರುವ ಸ್ವಾತಂತ್ರ್ಯೋತ್ಸವ ರಂಗ ಸಂಭ್ರಮ ಕಾರ್ಯಕ್ರಮಕ್ಕೆ ಕಲಾವಿದರ ಒಕ್ಕೂಟದ ಉಪಾಧ್ಯಕ್ಷ ಕೆ.ಜಿ.ವೆಂಕಟೇಶ್ ಚಾಲನೆ ನೀಡಿದ್ದು, ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ನಾಟಕಗಳು ಜನರನ್ನು ಒಂದುಗೂಡಿಸುವ ನಿಟ್ಟಿನಲ್ಲಿ ತುಂಬಾ ಮುಖ್ಯ ಪಾತ್ರ ವಹಿಸಿವೆ ಎಂದಿದ್ದಾರೆ.
ಕೆ.ಜಿ.ವೆಂಕಟೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ಶಿವಮೊಗ್ಗ ರಂಗಾಯಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾಟಕಗಳು ಜನರನ್ನು ಸಾಮಾಜಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಒಂದುಗೂಡಿಸುವ ಬಹು ಪ್ರಮುಖವಾದ ಮಾಧ್ಯಮ. ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ನಾಟಕಗಳು ಜನರನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಬಹು ಮುಖ್ಯ ಪಾತ್ರ ವಹಿಸಿವೆ. ಗಿರೀಶ್ ಕಾರ್ನಾಡ್ ಅವರಂತಹ ನಾಟಕಕಾರರು ಇತಿಹಾಸ, ಪುರಾಣಗಳಿಂದ ಪಾತ್ರವನ್ನು ಆಯ್ಕೆ ಮಾಡಿಕೊಂಡು ಜನಪರವಾದ ನಿಲುವುಗಳನ್ನು ಪ್ರದರ್ಶಿಸುವ ಕಾರ್ಯವನ್ನು ಮಾಡಿದ್ದಾರೆ ಎಂದರು.