ಶಿವಮೊಗ್ಗ: ಸೂರ್ಯಥಾನ್ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಫೆಬ್ರವರಿ 1ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಕಣಾದ ಯೋಗ ಮತ್ತು ರಿಸರ್ಚ್ ಫೌಂಡೇಶನ್ ಸಂಸ್ಥಾಪಕ ಕಾರ್ಯದರ್ಶಿ ಅನಿಲ್ ಕುಮಾರ್ ಹೆಚ್. ಶೆಟ್ಟರ್, ದೇಶಭಕ್ತಿ ಹಾಗೂ ಗುರುಭಕ್ತಿ ಜಾಗೃತಿಗಾಗಿ ಫಿಟ್ ಇಂಡಿಯಾ ಮತ್ತು ರಥಸಪ್ತಮಿ ಪ್ರಯುಕ್ತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಶಿವಮೊಗ್ಗದಲ್ಲಿ ನಡೆಯಲಿದೆ ಸೂರ್ಯಥಾನ್... ಏನಿದು ಸೂರ್ಯಥಾನ್? - The Suryathon event will be held in Shimoga
ಸೂರ್ಯಥಾನ್ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು, ಫೆಬ್ರವರಿ 1ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ
ಇಂದಿನ ಯುವಜನರಲ್ಲಿ ಯೋಗ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಉಡುಪಿಯ ಕೃಷ್ಣೈಕ್ಯ ಪೇಜಾವರ ಶ್ರೀಗಳಿಗೆ ಅರ್ಪಿಸಲಾಗುತ್ತಿದ್ದು, ಕಾರ್ಯಕ್ರಮದ ದಿಕ್ಸೂಚಿ ಭಾಷಣವನ್ನು ಚಕ್ರವರ್ತಿ ಸೂಲಿಬೆಲೆ ಮಾಡಲಿದ್ದಾರೆ ಎಂದರು.
ನಗರದಲ್ಲಿ 5ನೇ ಬಾರಿಗೆ ನಡೆಸಲಾಗುತ್ತಿರುವ ಕಾರ್ಯಕ್ರಮದಲ್ಲಿ, ವಿವಿಧ ಶಾಲಾ ಕಾಲೇಜುಗಳ ಎರಡು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಸಾಮೂಹಿಕವಾಗಿ 108 ಸೂರ್ಯ ನಮಸ್ಕಾರಗಳನ್ನು ಮಾಡಲಿದ್ದಾರೆ ಎಂದು ತಿಳಿಸಿದರು. ಬೆಳಗ್ಗೆ 6 ರಿಂದ 9.30 ರವರೆಗೆ ಸೂರ್ಯಥಾನ್ ಕಾರ್ಯಕ್ರಮದ ನಡೆಯಲಿದ್ದು, ಉದ್ಘಾಟನಾ ಸಮಾರಂಭದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಎನ್. ಎಲ್. ನಾಯಕ್ ಮತ್ತು ಅಜಿತ್ ಶ್ರೀ ಪ್ರಶಸ್ತಿ ಪುರಸ್ಕೃತ ಭ. ಮ. ಶ್ರೀಕಂಠ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರುತ್ತಾರೆ ಎಂದರು.