ಶಿವಮೊಗ್ಗ: ಮುಸ್ಲಿಂ ಮಹಿಳಾ ಕಾಲೇಜು ಪ್ರಾರಂಭಿಸುವ ಯಾವುದೇ ಪ್ರಸ್ತಾಪ ನಮ್ಮ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದ್ದಾರೆ.
ಭದ್ರಾವತಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ವಿದ್ಯಾರ್ಥಿನಿಯರಿಗಾಗಿ ಪ್ರತ್ಯೇಕ ಕಾಲೇಜು ಪ್ರಾರಂಭಿಸಬೇಕೆಂದು ಯಾರೂ ಸಹ ನನಗೆ ಮನವಿ ಸಲ್ಲಿಸಿಲ್ಲ. ಅಲ್ಲದೆ, ಆ ರೀತಿ ಆಲೋಚನೆ ನಮ್ಮ ಮುಂದೆ ಇಲ್ಲ ಎಂದರು.
ಮುಸ್ಲಿಂ ಮಹಿಳಾ ಕಾಲೇಜು ಪ್ರಾರಂಭಿಸುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ನಂತರ ಶಾಲಾ ಕಾಲೇಜು ಬಿಟ್ಟಿಲ್ಲ. ಅವರು ನಿರಂತರವಾಗಿ ತರಗತಿಗೆ ಹಾಜರಾಗುತ್ತಿದ್ದಾರೆ. ಮುಸ್ಲಿಂ ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗುತ್ತಿದ್ದಾರೆ. ಕೆಲ ಸಂಘಟನೆಗಳು ಗೊಂದಲವನ್ನುಂಟು ಮಾಡುತ್ತಿವೆ. ಪ್ರಮೋದ್ ಮುತಾಲಿಕ್ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.
ಓದಿ:ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಪ್ರಸ್ತಾವ ಇಲ್ಲ: ಶಶಿಕಲಾ ಜೊಲ್ಲೆ