ಶಿವಮೊಗ್ಗ:ಮನೆಗಳ್ಳತನ ಮಾಡಿ ಪರಾರಿಯಾಗಿದ್ದವನನ್ನು ಬಂಧಿಸುವಲ್ಲಿ ಹೊಳೆಹೊನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಮನೆಗಳ್ಳನ ಬಂಧನ: 148 ಗ್ರಾಂ ಚಿನ್ನಾಭರಣ, ಬೈಕ್ ವಶ - 3 ಸಾವಿರ ರೂ ನಗದು ಕಳ್ಳತನ
ಶಿವಮೊಗ್ಗದಲ್ಲಿ ಮನೆಗಳ್ಳತನ ಮಾಡಿ ಪರಾರಿಯಾಗಿದ್ದವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈತನಿಂದ 148 ಗ್ರಾಂ ಚಿನ್ನಾಭರಣ ಹಾಗೂ ಒಂದು ಬೈಕ್ ವಶಕ್ಕೆ ಪಡೆದಿದ್ದಾರೆ.
ಸೊಳೆಬೈಲು ಬಡಾವಣೆಯ ಸಯ್ಯದ್ ಮುಜ್ಜು (40) ಬಂಧಿತ ಆರೋಪಿ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೀರನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ 137 ಗ್ರಾಂ ಚಿನ್ನಾಭರಣ ಹಾಗೂ 3 ಸಾವಿರ ರೂ. ನಗದು ಕಳ್ಳತನವಾಗಿತ್ತು. ಈ ಕುರಿತು ತನಿಖೆ ಪ್ರಾರಂಭಿಸಿದ ಪೊಲೀಸರು, ಶಿವಮೊಗ್ಗದ ಸೊಳೆಬೈಲು ಬಡಾವಣೆಯ ಸಯ್ಯದ್ ಮುಜ್ಜುನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈತ ವಿವಿಧ ಮನೆ ಕಳ್ಳತನ ಮಾಡಿದ್ದು ಒಪ್ಪಿಕೊಂಡಿದ್ದಾನೆ.
ಈತನಿಂದ 148 ಗ್ರಾಂ ಚಿನ್ನಾಭರಣ ಹಾಗೂ ಒಂದು ಬೈಕ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಮುಜ್ಜುನನ್ನು ಬಂಧಿಸುವಲ್ಲಿ ಯಶಸ್ವಿಯಾದ ಭದ್ರಾವತಿ ಗ್ರಾಮಾಂತರ ಸಿಪಿಐ ಮಂಜುನಾಥ್, ಹೊಳೆಹೊನ್ನೂರು ಪಿಎಸ್ಐ ಸುರೇಶ್ ಹಾಗೂ ಸಿಬ್ಬಂದಿ ಕೃಷ್ಣಮೂರ್ತಿ ಸೇರಿದಂತೆ ಇತರರನ್ನು ಎಸ್ಪಿ ಅಭಿನಂದಿಸಿದ್ದಾರೆ.