ಶಿವಮೊಗ್ಗ: ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಶಿಕಾರಿಪುರ ಟೌನ್ ಪೊಲೀಸರು ದಾಳಿ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗಾಂಜಾ ಮಾರಾಟಕ್ಕೆ ಯತ್ನ: ಮೂವರ ಬಂಧನ - Marijuana and drugs latest news
ಶಿಕಾರಿಪುರದ ಆಶ್ರಯ ಬಡಾವಣೆ ಬಳಿ ಮಾರಾಟಕ್ಕಾಗಿ ಗಾಂಜಾವನ್ನು ಮೂವರು ಬೈಕ್ನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
Arrest
ಅಜ್ಜಪ್ಪ(60), ಸಂಜಯ್(20) ಹಾಗೂ ಇನ್ನೋರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿಗಳು ಶಿಕಾರಿಪುರದ ಆಶ್ರಯ ಬಡಾವಣೆ ಬಳಿ ಮಾರಾಟಕ್ಕಾಗಿ ಗಾಂಜಾವನ್ನು ಬೈಕ್ನಲ್ಲಿ ತೆಗೆದುಕೊಂಡು ಹೋಗುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಇನ್ನು ಬಂಧಿತರಿಂದ 27 ಸಾವಿರ ರೂ. ಬೆಲೆ ಬಾಳುವ 1 ಕೆಜಿ 240 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಈ ಕುರಿತು ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.