ಶಿವಮೊಗ್ಗ: ಒಂದೇ ಕುಟುಂಬದ ಮೂವರು ಕೋವಿಡ್ ಸೋಂಕಿಗೆ ಬಲಿಯಾಗಿರುವ ದಾರುಣ ಘಟನೆ ನಗರದ ಕುಂಬಾರಗುಂಡಿ ಬಡಾವಣೆಯಲ್ಲಿ ನಡೆದಿದೆ.
ಬಡಾವಣೆಯ ನಿವಾಸಿಗಳಾದ 60 ವರ್ಷದ ತಾಯಿ, 40 ವರ್ಷದ ಮಗ ಹಾಗೂ 35 ವರ್ಷದ ಮಗಳು ಮಹಾಮಾರಿಯಿಂದ ಮೃತಪಟ್ಟಿದ್ದಾರೆ. ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮೂವರನ್ನು ಕಳೆದ ನಾಲ್ಕು ದಿನಗಳ ಹಿಂದೆ ಮೆಗ್ಗಾನ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಮೂವರೂ ಕೂಡಾ ಕಳೆದ ರಾತ್ರಿ ಕೊನೆಯುಸಿರೆಳೆದರು.