ಕರ್ನಾಟಕ

karnataka

ETV Bharat / state

'RTI ಮಾಹಿತಿ ನೀಡದ ಅಧಿಕಾರಿಗೆ 15 ಸಾವಿರ ರೂ.ಗಳ ದಂಡ'

ಶಿವಮೊಗ್ಗದ ಕಾರ್ಗಲ್ ಪಟ್ಟಣ ಪಂಚಾಯತಿಯಲ್ಲಿ ಹಲವು ಹಗರಣಗಳು ನಡೆದಿದ್ದು, ಈ ಎಲ್ಲಾ ಹಗರಣಗಳ ತನಿಖೆ ಆಗಬೇಕಾಗಿದೆ, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕೆಂದು ಮಾನವ ಹಕ್ಕುಗಳ ಸೇವಾ ಸಮಿತಿಯ ರಾಜ್ಯ ಉಪಾಧ್ಯಕ್ಷ ಸುರೇಶ್ ಕಾರ್ಗರ್ ಹೇಳಿದರು.

15 ಸಾವಿರ ರೂ.ಗಳ ದಂಡ

By

Published : Aug 28, 2019, 4:44 AM IST

ಶಿವಮೊಗ್ಗ:ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದ ಅಧಿಕಾರಿಗೆ ಆಯೋಗ 15 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ ಎಂದು ರಾಷ್ಟ್ರೀಯ ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕುಗಳ ಸೇವಾ ಸಮಿತಿಯ ರಾಜ್ಯ ಉಪಾಧ್ಯಕ್ಷ ಸುರೇಶ್ ಕಾರ್ಗರ್ ತಿಳಿಸಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾರ್ಗಿಲ್ ಪಟ್ಟಣ ಪಂಚಾಯಿತಿಗೆ ಸೇರಿದ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕೇಳಲಾಗಿತ್ತು. ಆದರಲ್ಲಿ ಭ್ರಷ್ಟಾಚಾರ ನಡೆದಿದ್ದು, ಆ ಬಗ್ಗೆ ಕೇಳಿದ ದಾಖಲೆಗಳನ್ನು ಕೊಟ್ಟಿಲ್ಲ. ಇದನ್ನು ಪ್ರಶ್ನಿಸಿ ಸಾಗರ ತಾಲೂಕು ಸಮಾಜ ಕಲ್ಯಾಣ ಇಲಾಖೆಗೆ ದೂರು ನೀಡಲಾಗಿತ್ತು. ಅಲ್ಲಿ ಕೂಡ ಮಾಹಿತಿ ಸಿಗಲಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಕೂಡ ಇದರಲ್ಲಿ ಶಾಮೀಲಾಗಿದ್ದರು. ಇದರ ಜೊತೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯೋಜನಾ ನಿರ್ದೇಶಕ ಪ್ರಮೋದ್ ಮತ್ತು ಹಂಗಾಮಿ ನೌಕರ ಪ್ರದೀಪ್ ಕೂಡ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿ

ಈ ಎಲ್ಲಾ ವಿವರಗಳ ಮಾಹಿತಿ ನೀಡುವಂತೆ ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಹೇಳಲಾಗಿತ್ತು. ಆದರೆ ಮಾಹಿತಿ ಕೊಡುವ ಹೊಣೆಗಾರಿಕೆ ಹೊತ್ತಿದ್ದ ಲಕ್ಷ್ಮೀನಾರಾಯಣರು ಮಾಹಿತಿ ನೀಡದೆ ಅರ್ಜಿದಾರರನ್ನು ಮತ್ತು ಆಯೋಗವನ್ನು ಒಟ್ಟಿಗೆ ವಂಚಿಸಿದ್ದಾರೆ. ಈ ಬಗ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತರಾದ ವಿಜಯಕುಮಾರ್ ಸಮಗ್ರ ದಾಖಲಾತಿ ಪರಿಶೀಲನೆ ನಡೆಸಿ ವಂಚಿಸಿರುವುದು ನಿಜ ಎಂದು ಲಕ್ಷ್ಮಿ ನಾರಾಯಣ್ ಅವರಿಗೆ 15 ಸಾವಿರ ರೂ. ದಂಡ ಹಾಕಿದ್ದಾರೆ ಎಂದು ತಿಳಿಸಿದರು.

ABOUT THE AUTHOR

...view details