ಶಿವಮೊಗ್ಗ:ನಗರದಲ್ಲಿ ನಿನ್ನೆ ರಾತ್ರಿ ನಡೆದ ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್ಪಿ, ಶಿವಮೊಗ್ಗದ ಇಬ್ಬರನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ಪೊಲೀಸ್ ತಂಡವು ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದರು.
ಎಸ್ಪಿ ಲಕ್ಷ್ಮೀಪ್ರಸಾದ್ ಮಾಹಿತಿ ಯುವಕ ಹರ್ಷ ಮೃತದೇಹದ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಬಗ್ಗೆಯೂ ತನಿಖೆ ನಡೆಸಲಾಗುವುದು. ಈ ಬಗ್ಗೆ ಇನ್ನೂ ಎಫ್ಐಆರ್ ದಾಖಲಾದ ಬಳಿಕ ಸಕಲ ಕ್ರಮ ವಹಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಇದನ್ನೂ ಓದಿ:ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಫೆ.23ರ ವರೆಗೆ ಕರ್ಫ್ಯೂ ಘೋಷಣೆ
ನಿನ್ನೆ ರಾತ್ರಿ ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬಳಿಕ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ (ಸಿಆರ್‌ಪಿಸಿ ಸೆಕ್ಷನ್ 144) ಜಾರಿಗೊಳಿಸಲಾಗಿತ್ತು. ಬುಧವಾರ ಬೆಳಗ್ಗೆ 6 ಗಂಟೆವರೆಗೆ ಕರ್ಪ್ಯೂ ಆದೇಶ ಮುಂದುವರೆಸಲಾಗಿದೆ.
ಇದನ್ನೂ ಓದಿ:ಶಿವಮೊಗ್ಗ ಯುವಕ ಹರ್ಷ ಕೊಲೆ ಬಗ್ಗೆ ಗೃಹ ಸಚಿವರ ವರದಿ ಕುರಿತು ನಾಳೆ ಮಾಹಿತಿ: ಸಿಎಂ
ಅಲ್ಲದೇ, ಶಿವಮೊಗ್ಗ ನಗರದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಷೋಷಣೆ ಮಾಡಲಾಗಿತ್ತು. ನಾಳೆಯೂ ರಜೆ ಮುಂದುವರೆಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶಿಸಿದ್ದಾರೆ.