ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರ ಆಪ್ತರು ಎಂದು ಹೇಳಿಕೊಂಡು ಇಬ್ಬರು ಉದ್ಯಮಿಗಳಿಗೆ ಲಕ್ಷಾಂತರ ರೂ. ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಸಚಿವ ಕೆ.ಎಸ್.ಈಶ್ವರಪ್ಪ ಹೆಸರಲ್ಲಿ 36 ಲಕ್ಷ ರೂ. ವಂಚನೆ, ಇಬ್ಬರ ಬಂಧನ - shivamogga KS Eshwarappa news
ಸಚಿವ ಈಶ್ವರಪ್ಪ ಹೆಸರು ಹೇಳಿಕೊಂಡು ಲೋನ್ ಕೊಡಿಸುವುದಾಗಿ ನಂಬಿಸಿ ಮೈಸೂರಿನ ಉದ್ಯಮಿ ಮತ್ತು ಸಾಗರದ ಗುತ್ತಿಗೆದಾರನಿಂದ 36 ಲಕ್ಷ ರೂ. ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್
ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಸಚಿವ ಈಶ್ವರಪ್ಪ ಹೆಸರು ಹೇಳಿಕೊಂಡು ಲೋನ್ ಕೊಡಿಸುವುದಾಗಿ ನಂಬಿಸಿ ಮೈಸೂರಿನ ಉದ್ಯಮಿ ಮತ್ತು ಸಾಗರದ ಗುತ್ತಿಗೆದಾರನಿಂದ 36 ಲಕ್ಷ ರೂ. ಪಡೆದು ಖದೀಮರು ವಂಚಿಸಿದ್ದಾರೆ. ಈ ಕುರಿತು ವಂಚನೆಗೊಳಗಾದವರು ದೂರು ನೀಡಿದ ಹಿನ್ನೆಲೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಸದ್ಯಕ್ಕೆ ಇಬ್ಬರನ್ನು ಬಂಧಿಸಿದ್ದೇವೆ. ಓರ್ವ ಪರಾರಿಯಾಗಿದ್ದು, ಇನ್ನುಳಿದ ಆರೋಪಿಗಳನ್ನು ಸದ್ಯದಲ್ಲೇ ಬಂಧಿಸುತ್ತೇವೆ ಎಂದರು.
Last Updated : Oct 6, 2021, 12:38 PM IST